ಬೆಂಗಳೂರು : ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬೆಂಗಳೂರು ನಗರದಲ್ಲಿ ಆರಂಭವಾಗಿದ್ದ ಇಂದಿರಾ ಕ್ಯಾಂಟೀನ್ ಸಾಕಷ್ಟು ಮಂದಿಯ ಹಸಿವು ನೀಗಿಸುತ್ತಿದೆ.
ಇದನ್ನೂ ಓದಿ : ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಒಬ್ಬ ಕಾಡು ಮನುಷ್ಯ, ಪೋಕರಿ : ಸಿದ್ದರಾಮಯ್ಯ
ಆದ್ರೆ ಇದೀಗ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಬಿಬಿಎಂಪಿ ಬಿಕ್ಕಟ್ಟು ಎದುರಿಸುತ್ತಿದೆ. ಈ ಬಗ್ಗೆ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ (Dinesh Gundu Rao) ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಇಂದಿರಾ ಕ್ಯಾಂಟೀನ್ ನಿರ್ವಹಿಸುತ್ತಿರುವ ಬಿಬಿಎಂಪಿಗೆ ಸರ್ಕಾರ ಅನುದಾನ ನೀಡದಿರುವುದು ಹೊಟ್ಟೆಕಿಚ್ಚಿನ ರಾಜಕಾರಣ.
ಇಂದಿರಾ ಕ್ಯಾಂಟೀನ್ ಮುಖಾಂತರ ಬಡವರ ಹಸಿದ ಹೊಟ್ಟೆಗಳು ತುಂಬುವುದು? ಬಿಜೆಪಿ ಸರ್ಕಾರಕ್ಕೆ ಬೇಕಾಗಿಲ್ಲ. ಹಸಿವಿನ ಸಂಕಟ ಮತ್ತು ಅನ್ನದ ಬೆಲೆ ಗೊತ್ತಿದ್ದರೆ ಕೂಡಲೆ ಅನುದಾನ ಬಿಡುಗಡೆ ಮಾಡಲಿ ಎಂದು ಒತ್ತಾಯಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel