ಡಿಎಂಕೆ ಜೊತೆಗಿನ ಮೈತ್ರಿ ಮುಂದುವರಿಯಲಿದೆ : ದಿನೇಶ್ ಗುಂಡೂರಾವ್
ಬೆಂಗಳೂರು : ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್ ವಿಫಲವಾಗಿದ್ದು, ಕಾಂಗ್ರೆಸ್ ಭಾರಿ ಮುಖಭಂಗ ಅನುಭವಿಸಿದೆ.
ಈ ಹಿನ್ನೆಲೆ ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪ್ರತ್ಯೇಕವಾಗಿ ಚುನಾವಣೆ ಎದುರಿಸಲಿದೆ ಎಂದು ಹೇಳಲಾಗುತ್ತಿತ್ತು.
ಆದ್ರೆ 2019 ರ ಲೋಕಸಭಾಯಲ್ಲಿ ಡಿಎಂಕೆ ಜೊತೆಗಿನ ಮೈತ್ರಿ ಕಾಂಗ್ರೆಸ್ ಕೈ ಹಿಡಿದ ಕಾರಣ ವಿಧಾನಸಭಾ ಚುನಾವಣೆಯಲ್ಲೂ ಮೈತ್ರಿ ಮುಂದುವರಿಯಲಿದೆ ಎಂದು ತಮಿಳುನಾಡು ಕಾಂಗ್ರೆಸ್ ಉಸ್ತುವಾರಿ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತಮಿಳುನಾಡಲ್ಲಿ ಕಾಂಗ್ರೆಸ್ ಮೈತ್ರಿಗೆ ಬ್ರೇಕ್ ಬೀಳಲಿದೆ ಎಂಬ ಊಹಾಪೋಹಗಳ ಬಗ್ಗೆ ದಿನೇಶ್ ಗುಂಡೂರಾವ್ ಟ್ವೀಟ್ ಮಾಡಿ ಸ್ಪಷ್ಟನೆ ನೀಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಹಾಗೂ ಇತರೆ ಪಕ್ಷಗಳ ಜೊತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿತ್ತು.
ದಲಿತ ಶಾಸಕನಿಗೆ ನಿಮ್ಮ ಪಕ್ಷದಲ್ಲಿ ಬೆಲೆ ಇಲ್ಲವೇ : ಬಿಜೆಪಿ ಟ್ವೀಟ್ ಬಾಣ
ಇದರಿಂದಾಗಿ 2019ರ ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗಳಿಸಿತ್ತು. ಇದೀಗ ಮುಂಬರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಮೈತ್ರಿ ಮುಂದುವರೆಯಲಿದೆ.
ಈ ಮಹಾಘಟಬಂಧನ್ ಅನ್ನು ಬಲಿಷ್ಠಗೊಳಿಸಲು ಕಾಂಗ್ರೆಸ್ ತನ್ನದೇ ಬಹುಮುಖ್ಯ ಪಾತ್ರ ನಿಭಾಯಿಸಲಿದೆ ಎಂದು ತಿಳಿಸಿದ್ದಾರೆ.
ಇನ್ನು 2019ರ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಎಂಕೆ ಸ್ಟ್ಯಾಲಿನ್ ನೇತೃತ್ವದ ಕಾಂಗ್ರೆಸ್ ಒಳಗೊಂಡ ಮಹಾಘಟಬಂಧನ್ 38 ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾಗಿತ್ತು.
ಬೆಂಗಳೂರಿನ ದಕ್ಷಿಣದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ; ರ‍್ಯಾಪಿಡ್ ಟೆಸ್ಟ್ ಮೊರೆ ಮೋದ ಬಿಬಿಎಂಪಿ..!
ಎಡಪ್ಪಾಡಿ ಪಳನಿಸ್ವಾಮಿ ನೇತೃತ್ವದ ಎಐಎಡಿಎಂಕೆ ಹಾಗೂ ಎನ್ ಡಿಎ ಮೈತ್ರಿಕೂಟ ಕೇವಲ ಒಂದು ಸ್ಥಾನ ಮಾತ್ರ ಗೆದ್ದಿತ್ತು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel










