ಅರ್ನಬ್ ಬಂಧನ ಖಂಡಿಸಿದ ಬಿಜೆಪಿಗರಿಗೆ ದಿನೇಶ್ ಗುಂಡೂರಾವ್ ತಿರುಗೇಟು
ಬೆಂಗಳೂರು : ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿ ಅವರನ್ನು ಮಹಾರಾಷ್ಟ್ರ ಪೊಲೀಸರು ವಶಕ್ಕೆ ಪಡೆದಿದ್ದು, ಇದಕ್ಕೆ ಬಿಜೆಪಿ ನಾಯಕರು ಅಲ್ಲಿನ ಸರ್ಕಾರದ ವಿರುದ್ಧ ಕಿಡಿಕಾರುತ್ತಿದ್ದಾರೆ.
ಇದು ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದ ದಾಳಿ ಎಂದು ಹಲವಾರು ಬಿಜೆಪಿ ನಾಯಕರು ಟ್ವೀಟ್ ಮಾಡುತ್ತಿದ್ದಾರೆ.
ಅದರಂತೆ ಕೇಂದ್ರ ವಿದೇಶಾಂಗ ಸಚಿವ ಜೈ ಶಂಕರ್ ಟ್ವೀಟ್ ಮಾಡಿ ಅರ್ಬನ್ ಗೋಸ್ವಾಮಿ ಬಂಧನವನ್ನು ಖಂಡಿಸಿದ್ದಾರೆ.
ಇದನ್ನೂ ಓದಿ : ಸಂಪುಟ ವಿಸ್ತರಣೆ ಬಗ್ಗೆ ಕೇಳ್ಬೇಡಿ, ನನ್ನ ಮಂತ್ರಿಸ್ಥಾನ ಹೋಗುತ್ತೆ: ಸೋಮಶೇಖರ್
ಜೈ ಶಂಕರ್ ಅವರು ಈ ಟ್ವೀಟ್ ಗೆ ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ.
ದಿನೇಶ್ ಗುಂಡೂರಾವ್ ಟ್ವೀಟ್ ನಲ್ಲಿ..
ಇದನ್ನೂ ಓದಿ : ಇಂದಿನಿಂದ ಸಿಎಂ ಬಿಎಸ್ ವೈ ಮಂಗಳೂರು ಪ್ರವಾಸ
“ಅರ್ನಬ್ ಗೋಸ್ವಾಮಿ ಬಂಧನ ಜೈ ಶಂಕರ್ ಅವರಿಗೆ ಪತ್ರಿಕಾ ಸ್ವಾತಂತ್ರ್ಯದ ಮೇಲಿನ ದಾಳಿ ಎಂಬುದಾದರೆ, ಅವರದ್ದೇ ಪಕ್ಷದ, ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿಯನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ?” ಎಂದು ಟ್ವಿಟ್ಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel