Dinesh Karthik : ಟೀ ಇಂಡಿಯಾಗೆ ರೀ ಎಂಟ್ರಿ ಬಗ್ಗೆ ಡಿಕೆ ಟ್ವೀಟ್..
ಮೂರು ವರ್ಷಗಳ ನಂತರ ಟೀಂ ಇಂಡಿಯಾಗೆ ರೀ ಎಂಟ್ರಿ ಕೊಟ್ಟಿರುವ ದಿನೇಶ್ ಕಾರ್ತಿಕ್ ತಮ್ಮ ಪುನರಾಗಮನದ ಬಗ್ಗೆ ಆಸಕ್ತಿದಾಯಕ ಟ್ವೀಟ್ ಮಾಡಿದ್ದಾರೆ.
“ನಮ್ಮ ಮೇಲೆ ನಮಗೆ ನಂಬಿಕೆ ಇದ್ದಾಗ ನಾವು ನಿರೀಕ್ಷಿಸಿದಂತೆ ಎಲ್ಲವೂ ನಡೆಯುತ್ತದೆ. ಕಷ್ಟದ ಸಮಯದಲ್ಲಿ ಬೆಂಬಲ ನೀಡಿದ ಅಭಿಮಾನಿಗಳಿಗೆ ಧನ್ಯವಾದಗಳು.
ನನ್ನ ಮೇಲೆ ಭರವಸೆ ಇಟ್ಟು ನನಗೆ ಮತ್ತೊಂದು ಅವಕಾಶ ನೀಡಿದ ಆಯ್ಕೆದಾರರಿಗೆ ಧನ್ಯವಾದಗಳು” ಎಂದು ಡಿಕೆ ತಮ್ಮ ಟ್ವೀಟ್‌ನಲ್ಲಿ ತಿಳಿಸಿದ್ದಾರೆ. ಸದ್ಯ ಈ ಟ್ವೀಟ್ ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿದೆ.
ಪ್ರಸಕ್ತ ಐಪಿಎಲ್‌ನಲ್ಲಿ ಯಾವುದೇ ನಿರೀಕ್ಷೆಯಿಲ್ಲದೆ ಕಣಕ್ಕೆ ಇಳಿದ ಡಿಕೆ ಆರ್ ಸಿಬಿ ಪರ ಮಿಂಚಿನ ಇನ್ನಿಂಗ್ಸ್ ಆಡಿದರು. ಪರಿಣಾಮ ದಿನೇಶ್ ಕಾರ್ತಿಕ್ ಶೀಘ್ರದಲ್ಲೇ ದಕ್ಷಿಣ ಆಫ್ರಿಕಾ ವಿರುದ್ಧ ತವರಿನಲ್ಲಿ ನಡೆಯಲಿರುವ ಟಿ20 ಸರಣಿಗೆ ಆಯ್ಕೆಯಾಗಿದ್ದಾರೆ.
ಈ ಋತುವಿನಲ್ಲಿ ಆರ್ಸಿಬಿಯನ್ನು ಪ್ರತಿನಿಧಿಸುತ್ತಿರುವ ಡಿಕೆ ಬೆಸ್ಟ್ ಫಿನಿಶರ್ ಪಾತ್ರವನ್ನು ನಿರ್ವಹಿಸುತ್ತಿದ್ದಾರೆ. ಕಾರ್ತಿಕ್ ಈ ಋತುವಿನಲ್ಲಿ 14 ಪಂದ್ಯಗಳಲ್ಲಿ 57.40 ರ ಸರಾಸರಿಯಲ್ಲಿ 287 ರನ್ ಗಳಿಸಿದ್ದಾರೆ.
ಡಿಕೆ ಕೊನೆಯ ಬಾರಿಗೆ 2019 ರ ಏಕದಿನ ವಿಶ್ವಕಪ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಪರವಾಡಿದ್ದರು. ನಂತರ ಫಾರ್ಮ್ ಕೊರತೆಯಿಂದ ತಂಡದಲ್ಲಿ ಸ್ಥಾನ ಕಳೆದುಕೊಂಡರು.dinesh-karthik-dk-tweets-after-getting-selected-sa-t20is