ಆಸ್ಟ್ರೇಲಿಯಾ ಪ್ರವಾಸಕ್ಕೆ ಹೋಗುವ ನಿರೀಕ್ಷೆಯಲ್ಲಿದ್ದ ಟೀಂ ಇಂಡಿಯಾದ ವೇಗಿ ಮೊಹಮ್ಮದ್ ಶಮಿಗೆ ನಿರಾಶೆಯಾಗಿದೆ. ಬಿಸಿಸಿಐ ಶಮಿಯನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸುವ ಯೋಚನೆ ತಾತ್ಕಾಲಿಕವಾಗಿ ಕೈಬಿಟ್ಟಿದೆ ಎಂದು ತಿಳಿದುಬಂದಿದೆ.
ಶಮಿ ದೇಶೀಯ ಕ್ರಿಕೆಟ್ನಲ್ಲಿ ಇನ್ನಷ್ಟು ಕಾಲ ಆಡಲು ಮುಂದಾಗಿದ್ದು, ಮುಂದಿನ ವಾರ ನಡೆಯಲಿರುವ ಸೈಯದ್ ಮುಸ್ತಾಕ್ ಅಲಿ ಟ್ರೋಫಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. ಇದಕ್ಕೆ ಮುನ್ನ, ಶಮಿ ಎಂಪಿ ವಿರುದ್ಧದ ರಣಜಿ ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ 7 ವಿಕೆಟ್ಗಳನ್ನು ಕಬಳಿಸಿ ಗಮನ ಸೆಳೆದಿದ್ದಾರೆ.
ಅಭಿಮಾನಿಗಳು ಬಾರ್ಡರ್-ಗವಾಸ್ಕರ್ ಟ್ರೋಫಿಗಾಗಿ ಶಮಿಯನ್ನು ಆಸ್ಟ್ರೇಲಿಯಾಕ್ಕೆ ಕಳುಹಿಸುವ ನಿರೀಕ್ಷೆ ಹೊಂದಿದ್ದರು. ಆದರೆ ಬಿಸಿಸಿಐ ತನ್ನ ಪ್ಲಾನ್ನಲ್ಲಿ ಈಗಾಗಲೇ ಬದಲಾವಣೆ ಮಾಡಿರುವುದು ಅಭಿಮಾನಿಗಳ ನಿರೀಕ್ಷೆಗೆ ತೀವ್ರ ನಿರಾಸೆಯನ್ನು ತಂದಿದೆ.