ಚುನಾವಣೆ ಗೆಲ್ಲಲು ಶಿಸ್ತು ಬಹಳ ಅವಶ್ಯಕ : ಪ್ರಿಯಾಂಕಾ ಗಾಂಧಿ
ಲಖನೌ : ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಎಲ್ಲರೂ ಒಗ್ಗಟ್ಟಾಗಿ ಎದುರಿಸೋಣ. ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಶಿಸ್ತು ಬಹಳ ಅವಶ್ಯಕ ಅನ್ನೋದನ್ನು ಮರೆಯಬೇಡಿ ಎಂದು ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪಕ್ಷದ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.
ಪಕ್ಷ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಎಲ್ಲರೂ ಶ್ರಮಿಸಿ. ಯಾರೂ ಭಯಪಡಬೇಡಿ.
ಉತ್ತರಪ್ರದೇಶದ ಎಲ್ಲಾ ಪಂಚಾಯಿತಿಗಳಲ್ಲೂ ಕಾಂಗ್ರೆಸ್ ಅಸ್ತಿತ್ವ ಹೊಂದಿದೆ. ಶೀಘ್ರದಲ್ಲೇ ಗ್ರಾಮ ಪಂಚಾಯತ್ ಮಟ್ಟದ ಸಮಿತಿಗಳನ್ನು ರಚಿಸಲಾಗುವುದು. ಇಂದಿನಿಂದ ಚುನಾವಣೆವರೆಗೆ 24 ಗಂಟೆಯೂ ಕೆಲಸ ಮಾಡಿ ಎಂದು ಕರೆಕೊಟ್ಟಿದ್ದಾರೆ.
ಇನ್ನು ಯಾವುದೇ ಕಾರಣಕ್ಕೂ ಭಯಪಡಬೇಡಿ. ಎಲ್ಲರೂ ಒಗ್ಗಟ್ಟಾಗಿ ಚುನಾವಣೆ ಎದುರಿಸಿ ಗೆಲ್ಲೋಣ. ಚುನಾವಣೆಯಲ್ಲಿ ಗೆಲ್ಲಬೇಕೆಂದರೆ ಶಿಸ್ತು ಬಹಳ ಅವಶ್ಯಕ ಅನ್ನೋದನ್ನು ಮರೆಯಬೇಡಿ ಎಂದು ಕಾರ್ಯಕರ್ತರಿಗೆ ಕಿವಿಮಾತು ಹೇಳಿದರು.