ಮೋದಿ ನೇತೃತ್ವದ ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವುದನ್ನು ಬಿಟ್ಟು, ವಿರೋಧ ಪಕ್ಷಗಳೊಂದಿಗೆ ಮಾತನಾಡಿ, ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸುವ ಪ್ರಯತ್ನ ಮಾಡಬೇಕು ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.
ಬಜೆಟ್ ಮಂಡನೆ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮಮತಾ ಬ್ಯಾನರ್ಜಿ, ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರವು ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸದೆ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದೆ. ಕೇಂದ್ರ ಸರ್ಕಾರವು ದ್ವೇಷದ ರಾಜಕೀಯ ಮಾಡುವ ಬದಲು ಆರ್ಥಿಕತೆಯನ್ನು ಸುಧಾರಿಸಲು ಗಮನಹರಿಸಬೇಕು. ಪ್ರಧಾನಮಂತ್ರಿಯವರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅಗತ್ಯ ಬಿದ್ದರೆ ವಿರೋಧ ಪಕ್ಷಗಳೊಂದಿಗೆ ಚರ್ಚೆ ನಡೆಸಬೇಕು ಎಂದು ತಿಳಿಸಿದರು.
ಇಂದು ಮಂಡನೆಯಾಗಿರುವ ಬಜೆಟ್ ಜನಪರವಾಗಿದ್ದು, ಜನರ ಅಗತ್ಯಗಳನ್ನು ಮನದಲ್ಲಿಟ್ಟುಕೊಂಡೇ ಮಂಡಿಸಲಾಗಿದೆ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ತಿಳಿಸಿದರು.
ವಿಜಯೇಂದ್ರನನ್ನು ಇಳಿಸಿ BJP ಉಳಿಸಿ ಪತ್ರ ಹೋರಾಟ
ಬಣ ಬಡಿದಾಟದ ಕಥೆ ಒಂದು ಕಡೆಯಾದರೆ ಇನ್ನೊಂದೆಡೆ ಅನಾಮಧೇಯ ಪತ್ರವೊಂದು BJPಯಲ್ಲಿ ಭಾರೀ ಸಂಚಲನ ಸೃಷ್ಟಿಸಿದೆ. ವಿಜಯೇಂದ್ರ, ಯಡಿಯೂರಪ್ಪ, ಆರ್.ಅಶೋಕ್ ರವರುಗಳು ಅಡ್ಡೆಸ್ಟ್ಮೆಂಟ್ ಪಾಲಿಟಿಕ್ಸ್ ಮಾಡುತ್ತಿದ್ದಾರೆಂದು ಆರೋಪಿಸಿ...