ಮಂಗಳೂರು: ಮಲೆನಾಡಿನ ಡೀಮ್ಡ್ ಫಾರೆಸ್ಟ್ ಸಮಸ್ಯೆ ಬಗ್ಗೆ ಕಂದಾಯ ಸಚಿವರ ಜೊತೆ ಈಗಾಗಲೇ ಮಾತುಕತೆ ನಡೆಸಲಾಗಿದೆ. ಅಧಿವೇಶನದ ಸಂದರ್ಭದಲ್ಲಿ ಕರಾವಳಿ ಮತ್ತು ಮಲೆನಾಡಿನ ಎಲ್ಲಾ ಶಾಸಕರ ಉಪಸ್ಥಿತಿಯಲ್ಲಿ ವಿಶೇಷ ಸಭೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವ ಅಂಗಾರ ಹೇಳಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಆಯೋಜಿಸಿದ್ದ ಪತ್ರಕರ್ತರ ಗ್ರಾಮ ವಾಸ್ತವ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಅಂಗಾರ, ಕಂದಾಯ ಮತ್ತು ಅರಣ್ಯ ಸಚಿವರ ಜೊತೆ ವಿಶೇಷ ಸಭೆ ನಡೆಸಿ ಸಮಸ್ಯೆ ಪರಿಹರಿಸಲಾಗುವುದು. 94 ಸಿ ಯೋಜನೆಯಡಿ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಅವಕಾಶ ಕೊಡುವಂತೆ ಕೇಳಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel