ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಅಥಣಿಯ ತೀರ್ಥ ಗ್ರಾಮಕ್ಕೆ ಉಪ ಮುಖ್ಯಮಂತ್ರಿಗಳಾದ ಶ್ರೀ ಲಕ್ಷ್ಮಣ ಸವದಿ ಜಿ, ಯವರೊಂದಿಗೆ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಯವರು ಭೇಟಿ ನೀಡಿ, ವಿವಿಧ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಸಭೆ ನಡೆಸಿ, ಕೊರೋನಾ ವೈರಸ್ ಹರಡದಂತೆ ತಡೆಗಟ್ಟಲು ಕೈಗೊಂಡ ಕ್ರಮಗಳ ಕುರಿತು ಚರ್ಚಿಸಿ, ಸಭೆ ಉದ್ದೇಶಿಸಿ ಮಾತನಾಡಿದರು.

ಮಾನ್ಯ ಪ್ರಧಾನ ಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಜಿ, ಯವರು ಹೇಳಿದಂತೆ ಹಿರಿಯರ ಆರೋಗ್ಯದ ಕಾಳಜಿ ವಹಿಸಬೇಕು ಎಂದು ಕರೆ ನೀಡಿ, ಏನಾದರು ಸಮಸ್ಯೆಗಳಿದ್ದರೇ ತಕ್ಷಣ ನಮ್ಮ ಗಮನಕ್ಕೆ ತರುವಂತೆ ಸೂಚಿಸಿದರು.









