Puttur | ಪ್ರಯಾಣಿಕನ ಎದೆಗೆ ಕಂಡಕ್ಟರ್ ಕಾಲು.. ವಿಡಿಯೋ ವೈರಲ್
ದಕ್ಷಿಣ ಕನ್ನಡ : ಪುತ್ತೂರು ತಾಲೂಕಿನ ಈಶ್ವರಮಂಗಲದ ಬಳಿ ಅವಮಾನವೀಯ ಘಟನೆವೊಂದು ನಡೆದಿದ್ದು, ಕೆಎಸ್ ಆರ್ ಟಿಸಿ ಬಸ್ ಕಂಡೆಕ್ಟರ್ ಓರ್ವ ಪ್ರಯಾಣಿಕನ ಎದೆಗೆ ಕಾಲಿನಿಂದ ತುಳಿದು ರಸ್ತೆಗೆ ದೂಡಿ ಹಾಕಿದ ಘಟನೆ ನಡೆದಿದೆ.
ಕೆಎ 21 ಎಫ್ 0002 ನಂಬರ್ ನ ಬಸ್ ನಿರ್ವಾಹಕ ಪ್ರಯಾಣಿಕನಿಗೆ ಕಾಲಿನಿಂದ ತುಳಿದು ಹಾರಹಾಕಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿ ಪ್ರಯಾಣಿಕ ಪಾನಮತ್ತನಂತೆ ಕಂಡು ಬರುತ್ತಿದ್ದು, ಬಸ್ ಹತ್ತುವಾಗಲೇ ನಿರ್ವಾಹಕ ಪ್ರಯಾಣಿಕನನ್ನು ತಡೆದಿದ್ದಾರೆ.
ಜೊತೆಗೆ ಆತನ ಕೊಡೆಯನ್ನು ರಸ್ತೆಗೆ ಎಸೆಯುತ್ತಾನೆ. ಬಳಿಕ ಕೈಯಿಂದ ಹಲ್ಲೆ ನಡೆಸುವುದಲ್ಲದೇ ಕೊನೆಗೆ ಕಾಲಿನಿಂದ ಪ್ರಯಾಣಿಕನ ಎದೆಗೆ ತುಳಿದು ರಸ್ತೆಗೆ ದೂಡಿ ಹಾಕಿದ್ದಾರೆ