ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ : ರೇಣುಕಾಚಾರ್ಯ Renukacharya
ಬೆಂಗಳೂರು : ಇಂದಿನ ರಾಜಕಾರಣದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ ಎಂದು ಶಾಸಕ ಎಂ.ಪಿ.ರೇಣುಕಾಚಾರ್ಯ ಬೇಸರ ವ್ಯಕ್ತಪಡಿಸಿದ್ದಾರೆ.
ದೆಹಲಿಗೆ ಶಾಸಕರನ್ನು ಕರೆದೊಯ್ಯುವ ಬಗ್ಗೆ ರೇಣುಕಾಚಾರ್ಯ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾದರು.
ಬಳಿಕ ಸುದ್ದಿಗಾರರೊಂದಿಗೆ ಮಾನತಾಡಿದ ಅವರು, ಈ ಬಗ್ಗೆ ಚರ್ಚೆ ನಡೆಸುತ್ತೇವೆ. ಇಂದಿನ ರಾಜಕಾರಣವೇ ಬೇಸರವಾಗಿದೆ.
ಇಂದಿನ ರಾಜಕಾರಣದಿಂದಾಗಿ ಮನಸ್ಸಿಗೆ ತುಂಬಾ ನೋವಾಗಿದೆ. ರಾಜಕಾರಣದ ಬಗ್ಗೆ ಮಾತನಾಡಲು ಅಸಹ್ಯವಾಗುತ್ತಿದೆ ಎಂದು ಹೇಳಿದರು.
ಇನ್ನು ಕೇಂದ್ರ ಸಂಪುಟದ ಬಗ್ಗೆ ಮಾತನಾಡಿ, ಕೇಂದ್ರ ಸಂಪುಟದಲ್ಲಿ ರಾಜ್ಯಕ್ಕೆ ಬಂಪರ್ ಕೊಡುಗೆ ಸಿಕ್ಕಿದೆ. ರಾಜ್ಯಕ್ಕೆ ಅವಕಾಶ ನೀಡಿದ್ದನ್ನು ಸ್ವಾಗತಿಸುತ್ತೇವೆ.
ಸಂಪುಟದಲ್ಲಿ ಸಾಮಾಜಿಕ ನ್ಯಾಯ, ಪ್ರಾದೇಶಿಕ ಸಮತೋಲನೆಗೆ ಆದ್ಯತೆ ನೀಡಲಾಗಿದೆ. ರಾಷ್ಟ್ರ ರಾಜಕಾರಣ ಮಾತನಾಡುವಷ್ಟು ದೊಡ್ಡವನಲ್ಲ ಎಂದರು.