ಕಸಬಾ ಹೋಬಳಿಯ ಅರ್ಹ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪ್ರತಿ pension order ವಿತರಣೆ
ಮಂಡ್ಯ : ಜಿಲ್ಲೆಯ ಕಸಬಾ ಹೋಬಳಿಯ ಅರ್ಹ ಫಲಾನುಭವಿಗಳಿಗೆ ತಹಶೀಲ್ದಾರ್ ಎಂ.ವಿ.ರೂಪ ಅವರು, ಆದೇಶ ಪ್ರತಿಗಳನ್ನು ವಿತರಿಸಿದ್ದಾರೆ. ಅಲ್ಲದೇ ಸರ್ಕಾರದ ವಿವಿಧ ಯೋಜನೆಗಳ ಫಲವನ್ನು ಅರ್ಹ ಫಲಾನುಭವಿಗಳು ಯಾವುದೇ ಮಧ್ಯವರ್ತಿಗಳನ್ನು ಅವಲಂಭಿಸದೇ ನಿಗಧಿತ ಅರ್ಜಿಯನ್ನು ಸಲ್ಲಿಸಿ ನೇರವಾಗಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.
ಕಳೆದ ಏಳೆಂಟು ತಿಂಗಳುಗಳಿಂದ ತಾಲ್ಲೂಕಿನ ವಿವಿಧ ಫಲಾನುಭವಿಗಳಿಗೆ ಪಿಂಚಣಿ ಹಣವು ಬರದಿರುವುದು ನನ್ನ ಗಮನಕ್ಕೆ ಬಂದಿದೆ. ಅಂತಹ ನೊಂದ ಜನರು ಸಮೀಪದ ನಾಡಕಛೇರಿಗಳಿಗೆ ಇಲ್ಲವೇ ತಾಲೂಕು ಕಛೇರಿಗೆ ಆದೇಶ ಮಂಜೂರಾತಿ ಪತ್ರ, ಬ್ಯಾಂಕ್ ಪಾಸ್ ಬುಕ್, ಆಧಾರ್ ಕಾರ್ಡ್ ಗಳನ್ನು ನೀಡಿದರೆ ಅಂತಹ ಜನರ ಸಮಸ್ಯೆಗಳನ್ನು ಸರಿಪಡಿಸಿ ಫಲಾನುಭವಿಗಳ ಖಾತೆಗೆ ಹಣ ಸಂದಾಯ ಮಾಡಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸಚಿವ ನಾರಾಯಣಗೌಡರ ಆಪ್ತಸಹಾಯಕ ಸಂತೂ, ರಾಜಶ್ವನಿರೀಕ್ಷಕಿ ಚಂದ್ರಕಲಾ, ಗ್ರಾಮಲೆಕ್ಕಾಧಿಕಾರಿ ಹರೀಶ್ ಮತ್ತಿತರರು ಉಪಸ್ಥಿತರಿದ್ದರು.









