ಮಂಡ್ಯ: ಗಣೇಶ ವಿಸರ್ಜನೆ (Ganpati Idol Procession) ಸಂದರ್ಭದಲ್ಲಿ ಉಂಟಾಗಿರುವ ಕೋಮುಗಲಭೆ (Communal Violence) ಸಂಭವಿಸಿದಂತೆ ಈಗಾಗಲೇ ಹಲವರನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೇ, ನಾಗಮಂಗಲ ಪಟ್ಟಣದಲ್ಲಿ (Nagamangala town) 144 ಸೆಕ್ಷನ್ ಜಾರಿ ಮಾಡಲಾಗಿದೆ.
ಬುಧವಾರ ರಾತ್ರಿಯಿಂದಲೇ 144 ಸೆಕ್ಷನ್ ಜಾರಿ ಮಾಡಲಾಗಿದ್ದು, ಪಟ್ಟಣ ವ್ಯಾಪ್ತಿಯ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಪ್ರಕರಣ ಸಂಬಂಧ ಇಲ್ಲಿಯವರೆಗೆ 46 ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ನಾಗಮಂಗಲ ಪಟ್ಟಣದ್ಯಾಂತ ಪೊಲೀಸರ ಸರ್ಪಗಾವಲು ಹಾಕಿದ್ದಾರೆ.
ಅನ್ಯಕೋಮಿನ ಯುವಕರ ಕೃತ್ಯ ಖಂಡಿಸಿ ನಾಗಮಂಗಲ ಬಂದ್ ಗೆ ವಿಶ್ವಹಿಂದೂ ಪರಿಷತ್, ಭಜರಂಗ ದಳ ಸೇರಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿವೆ.







