ತಡವಾದ ವಿವಾಹದಿಂದ ವಿಚ್ಛೇದನ ಜಾಸ್ತಿ Divorce saaksha tv
ಉಡುಪಿ: ತಡವಾದ ವಿವಾಹದಿಂದ ವಿಚ್ಛೇದನ ಜಾಸ್ತಿಯಾಗಿದೆ. ಕುಟುಂಬ ವ್ಯವಸ್ಥೆ ಶಿಥಿಲಗೊಂಡಿದೆ ಎಂದು ಸ್ವರ್ಣವಲ್ಲಿ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಅಲ್ಲದೇ ವಿವಾಹದ ವಯಸ್ಸನ್ನು ಸರ್ಕಾರ ಏರಿಕೆ ಮಾಡಿರುವುದರಿಂದ ಇನ್ನಷ್ಟು ಸಮಸ್ಯೆಗಳು ಬಾಧಿಸಲಿದೆ. ಮಹಿಳೆಯರ ವಿವಾಹದ ವಯಸ್ಸು ಏರಿಕೆಯಿಂದ ಹಿಂದುಗಳ ಸಂಖ್ಯೆಗೆ ಕುತ್ತು ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ನಿರ್ಣಯದ ಬಗ್ಗೆ ಉಡುಪಿಯ ಕೃಷ್ಣಮಠದ ವಿಶ್ವಾರ್ಪಣಂ ಧಾರ್ಮಿಕ ಸಭೆಯಲ್ಲಿ ಮಾತಮಾಡಿದ ಸ್ವಾಮೀಜಿ, ಸರ್ಕಾರ ಈ ನಿರ್ಧಾರವನ್ನು ಮರುಪರಿಶೀಲನೆ ಮಾಡಬೇಕು. ಈ ನಿರ್ಧಾರ ಹಿಂದೂಗಳಿಗೆ ಅನ್ಯಾಯವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೇ ಮುಸ್ಲಿಮರಿಗೆ ಕ್ರೈಸ್ತರಿಗೆ ವಿವಾಹದ ಕಾನೂನು ಬೇರೆ ಇದೆ ಎಂದಿರುವ ಶ್ರೀಗಳು, ಎಲ್ಲರಿಗೂ ಅನ್ವಯವಾಗುವ ರೀತಿ ನೀವು ಯಾಕೆ ಕಾನೂನು ಕಾಯ್ದೆ ಯಾಕೆ ರೂಪಿಸುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.
ಮುಸ್ಲಿಮರ ಕಾನೂನಲ್ಲಿ ವಿವಾಹದ ವಯಸ್ಸು ಈಗಲೂ 15 ಇದೆ. ಈ ಕಾನೂನಿನ ಪ್ರಕಾರ ಮುಸ್ಲಿಮರ ಜನಸಂಖ್ಯೆ ಏರಿಕೆ ಪ್ರಮಾಣ ಜಾಸ್ತಿ ಇದೆ. ಹಿಂದೂಗಳ ಜನಸಂಖ್ಯೆ ಕಮ್ಮಿ ಇದೆ. ಹಿಂದೂಗಳ ಸಂಖ್ಯೆ ಇಳಿಕೆಯಾಗುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.









