ದೀಪಾವಳಿಗೆ ಕರ್ನಾಟಕದಲ್ಲಿ ಪಟಾಕಿ ನಿಷೇಧ ಸಾಧ್ಯತೆ Diwali ban fireworks
ಬೆಂಗಳೂರು, ನವೆಂಬರ್04: ದೀಪಾವಳಿ ಸಂಭ್ರಮಕ್ಕೆ ಜನಜಂಗುಳಿ ಸೇರುವ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಹರಡುವ ಭೀತಿಯ ಜೊತೆಗೆ ಮತ್ತೊಂದು ಆತಂಕವೂ ಇದೀಗ ಎದುರಾಗಿದೆ. Diwali ban fireworks

ಹಬ್ಬದ ಸಂದರ್ಭದಲ್ಲಿ ಪಟಾಕಿಯ ಹೊಗೆಯಿಂದ ಕೊರೋನಾ ಸೋಂಕು ಹೆಚ್ಚಾಗುವ ಸಂಭವವಿದೆ ಎಂದು ತಜ್ಞರು ಶಂಕಿಸಿದ್ದಾರೆ.
ಸರ್ಕಾರಿ ಬ್ಯಾಂಕ್ ಗಳಲ್ಲಿ ನಗದು ಹಿಂಪಡೆಯುವಿಕೆ ಮತ್ತು ಠೇವಣಿಗಳ ಮೇಲೆ ಹೆಚ್ಚುವರಿ ಶುಲ್ಕವಿಲ್ಲ
ಈಗಾಗಲೇ ರಾಜಸ್ಥಾನ, ಒಡಿಶಾ, ಪಶ್ಚಿಮ ಬಂಗಾಳ ಮತ್ತು ಹರಿಯಾಣ ಮುಂತಾದ ರಾಜ್ಯಗಳಲ್ಲಿ ಕೊರೋನಾ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ದೀಪಾವಳಿಯಂದು ಪಟಾಕಿಗೆ ನಿಷೇಧ ಹೇರಲಾಗಿದೆ.

ಈಗ ಕರ್ನಾಟಕ ರಾಜ್ಯ ಸರ್ಕಾರ ಕೂಡ ಇದೇ ದಾರಿಯಲ್ಲಿ ಹೊರಟಿದ್ದು, ಈ ಬಗ್ಗೆ ಚರ್ಚಿಸಲು ತಜ್ಞರ ಸಮಿತಿ ರಚಿಸಿದೆ.
ದೀಪಾವಳಿ ಸಂದರ್ಭದಲ್ಲಿ ಪಟಾಕಿ ನಿಷೇಧ ಮಾಡಬೇಕೇ ಬೇಡವೇ ಎಂಬ ಬಗ್ಗೆ ಇಂದು ಸಂಜೆ ಅಥವಾ ನಾಳೆಯೊಳಗೆ ತಜ್ಞರ ಸಮಿತಿ ವರದಿ ನೀಡಲಿದ್ದು, ಆ ಬಳಿಕ ಪಟಾಕಿ ಮಾರಾಟ ಕುರಿತ ನಿರ್ಧಾರ ಪ್ರಕಟಿಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel
ಟ್ವಿಟರ್ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ








