SC, ST ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಗಿಫ್ಟ್
ಬೆಂಗಳೂರು : ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಸರ್ಕಾರದಿಂದ ದೀಪಾವಳಿ ಉಡುಗೊರೆ ದೊರಕಿದೆ.
ಪರಿಶಿಷ್ಠ ಜಾರಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯಗಳಿಎ ಮೀಸಲಾತಿ ಹೆಚ್ಚಳಕ್ಕೆ ಸಂಬಂಧಿಸಿದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಂಕಿತ ಹಾಕಿದ್ದಾರೆ.
ರಾಜ್ಯ ಸರ್ಕಾರ ರಾಜ್ಯದ ಎಸ್ ಸಿ, ಎಸ್ ಟಿ ಸಮುದಾಯಗಳಿಗೆ ಕ್ರಮವಾಗಿ 2% ಮತ್ತು 4% ಮೀಸಲಾತಿಯನ್ನು ಹೆಚ್ಚಿಸಿದ್ದು, ಮೀಸಲಾತಿ ಪ್ರಮಾಣ 50% ರಿಂದ 56% ಹೆಚ್ಚಿಸಲಾಗಿದೆ.

ಆದ್ರೆ ಇಂದಿರಾ ಸಹಾನಿ ಪ್ರಕರಣದಲ್ಲಿ ಮೀಸಲಾತಿ ಪ್ರಮಾಣವನ್ನು 50% ಮೀರಬಾರದು ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಇನ್ನು ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿರುವುದನ್ನ ಸಿಎಂ ಬಸವರಾಜ ಬೊಮ್ಮಾಯಿ ಸ್ವಾಗತಿಸಿದ್ದಾರೆ.
ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ.
ಈ ಆಧ್ಯಾದೇಶಕ್ಕೆ ವಿಧಾನಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ತಿಳಿಸಿದ್ದಾರೆ.








