ಬೆಂಗಳೂರು: ಡಿಜೆ ಹಳ್ಳಿ , ಕೆಜೆ ಹಳ್ಳಿ ಗಲಭೆ ಪ್ರಕರಣದಲ್ಲಿ ಪ್ರಮುಖವಾಗಿ ಎಸ್ ಡಿಪಿಐ ಮತ್ತು ಪಿಎಫ್ಐ ಸಂಘಟನೆಯ ಕೈವಾಡವಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಎಸ್.ಡಿ.ಪಿ.ಐ. ಮತ್ತು ಪಿಎಫ್ಐ ಸಂಘಟನೆಗಳ ನಿಷೇಧಕ್ಕೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ನಿರ್ಧರಿಸಿರುವುದಾಗಿ ಸಚಿವ ಆರ್ ಅಶೋಕ್ ಅವರು
ಮಾಹಿತಿ ನೀಡಿದ್ದಾರೆ.
ಇದೇ ವೇಳೆ ಮಾತು ಮುಂದುವರೆಸಿದ ಆರ್ ಅಶೋಕ್ ರಾಜ್ಯದಲ್ಲಿ ಯಾವುದೇ ದೇಶದ್ರೋಹಿ ಸಂಘಟನೆ ಇರಬಾರದು. ಮುಖ್ಯಮಂತ್ರಿಗಳು ಸೂಚನೆ ನೀಡಿದ ನಂತರ ಪಿಎಫ್ಐ ಮತ್ತು ಎಸ್.ಡಿ.ಪಿ.ಐ. ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗುವುದು ಎಂದು ಹೇಳಿದರು.
ನಾಲ್ಕು ವರ್ಷಗಳ ವನವಾಸ ಮುಗಿಸಿ ಮರಳಿದ ಸ್ವಿಂಗ್ ಸುಲ್ತಾನ್ ಭುವನೇಶ್ವರ್ ಕುಮಾರ್ :ಭುವನೇಶ್ವರ್ ಕುಮಾರ್ ಪುನರಾಗಮನಕ್ಕೆ ಅಜಿತ್ ಅಗರ್ಕರ್ ಅಡ್ಡಗಾಲು ಹಾಕಿದ್ದರಾ? ಆಯ್ಕೆ ಸಮಿತಿಯ ಒಳಗಿನ ಗುಟ್ಟು ರಟ್ಟು?
ಮುಂಬೈ: ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಒಂದು ಕಡೆ ಸಂತಸದ ಸುದ್ದಿ ಸಿಕ್ಕಿದ್ದರೆ, ಮತ್ತೊಂದು ಕಡೆ ಆಯ್ಕೆ ಸಮಿತಿಯ ಒಳಗಿನ ಅಸಲಿ ಆಟ ಈಗ ಬಯಲಾಗಿದೆ. ಮುಂಬರುವ ನ್ಯೂಜಿಲೆಂಡ್...








