ಬೆಂಗಳೂರು: ಆಗಸ್ಟ್ ತಿಂಗಳಲ್ಲಿ ಬೆಂಗಳೂರಿನ ಡಿ.ಜೆ ಹಳ್ಳಿ, ಕೆ.ಜಿ ಹಳ್ಳಿ ಗಲಭೆಗೆ ಕಾರಣವಾದ ಫೇಸ್‍ಬುಕ್ ಪೋಸ್ಟ್ ಹಾಕಿದ್ದ ನವೀನ್‍ಗೆ ಹೈಕೋರ್ಟ್‍ನಿಂದ ಕಠಿಣ ಷರತ್ತುಬದ್ಧ ಜಾಮೀನು ಸಿಕ್ಕಿದೆ.
ಫೇಸ್‍ಬುಕ್‍ನಲ್ಲಿ ಪ್ರಚೋದನಾಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸಂಬಂಧಿಯೂ ಆಗಿರುವ ನವೀನ್‍ನನ್ನು ಕೆ.ಜಿ ಹಳ್ಳಿ ಪೊಲೀಸರು ಬಂಧಿಸಿದ್ದರು. ನವೀನ್‍ನನ್ನು ಬಂಧಿಸಿದ ನಂತರವೂ ಆಗಸ್ಟ್ 11ರ ರಾತ್ರಿ ದುಷ್ಕರ್ಮಿಗಳು ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಹಚ್ಚಿದ್ದಲ್ಲದೆ, ಕೆ.ಜಿ ಹಳ್ಳಿ ಹಾಗೂ ಡಿ.ಜೆ ಹಳ್ಳಿ ಪೊಲೀಸ್ ಠಾಣೆಗಳಿಗೆ ಬೆಂಕಿ ಹಚ್ಚಿ ಗಲಾಟೆ ಮಾಡಿದ್ದರು.
ನವೀನ್ ಪೋಸ್ಟ್ ಬಳಿಕ ನಡೆದ ಗಲಾಟೆ ನಿಯಂತ್ರಿಸಲು ಪೊಲೀಸರು ಗೋಲಿಬಾರ್ ನಡೆಸಿದ್ದರು. ಗೋಲಿಬಾರ್‍ನಲ್ಲಿ ಮೂವರು ಮೃತಪಟ್ಟು ಹಲವರು ಗಾಯಗೊಂಡಿದ್ದರು.
ನವೀನ್‍ಗೆ ಜಾಮೀನು ನೀಡಿದರೆ ಸಮಾಜದಲ್ಲಿ ಅಶಾಂತಿ ತಲೆದೋರಲಿದೆ, ಜತೆಗೆ ಆತನಿಗೆ ಪ್ರಾಣ ಬೆದರಿಕೆಯೂ ಇದೆ. ಹೀಗಾಗಿ ಜಾಮೀನು ನೀಡದಂತೆ ವಿಶೇಷ ಅಭಿಯೋಜಕರು ಹೈಕೋರ್ಟ್ ಗಮನಕ್ಕೆ ತಂದರು.
ಆದರೆ, ಈ ಕಾರಣಕ್ಕೆ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ನವೀನ್ ತನ್ನ ಫೇಸ್‍ಬುಕ್ ಪೋಸ್ಟ್ ಡಿಲೀಟ್ ಮಾಡಿದ್ದಾನೆ. ಹೀಗಾಗಿ ಕಠಿಣ ಷರತ್ತುಗಳೊಂದಿಗೆ ಜಾಮೀನು ನೀಡುತ್ತಿದ್ದೇನೆ.
ನವೀನ್ ಮತ್ತೆ ಇಂತಹ ಕೃತ್ಯದಲ್ಲಿ ಭಾಗಿಯಾದ್ರೆ ಜಾಮೀನು ರದ್ದುಪಡಿಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಎ ಪಾಟೀಲ್ ಪೀಠ ನೀಡಿದ ಆದೇಶದಲ್ಲಿ ತಿಳಿಸಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel