ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗಿನ ವರದಿಯಲ್ಲಿ ಒಂದು ಕೊರೊನಾ ಪ್ರಕರಣ ವರದಿಯಾಗಿದೆ. ಬೆಂಗಳೂರಿನಿಂದ ಕುಡುಪು ಸಮೀಪದ ಮನೆಗೆ ಬಂದಿದ್ದ 40 ವರ್ಷ ಪ್ರಾಯದ ಮಹಿಳೆಯೊಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ಉಡುಪಿಯಲ್ಲಿ ಮತ್ತೆ ಆರು ಹೊಸ ಕೊರೊನಾ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಉಡುಪಿಯಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 21ಕ್ಕೆ ಏರಿಕೆಯಾಗಿದೆ.
ಕರ್ನಾಟಕ ರಾಜ್ಯದಲ್ಲಿ ಬುಧವಾರ ಬೆಳಗ್ಗಿನ ಬುಲಿಟಿನ್ ನಲ್ಲಿ 63 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ಒಟ್ಟು ಪ್ರಕರಣಗಳ ಸಂಖ್ಯೆ 1458ಕ್ಕೆ ಏರಿಕೆಯಾಗಿದೆ. ಒಟ್ಟು 40 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ