ADVERTISEMENT
Friday, August 14, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಗ್ರಾಮಪಂಚಾಯಿತಿಗಳಿಗೆ ಸಂವಿಧಾನ ಬದ್ಧವಾಗಿ ಚುನಾವಣೆ ನಡೆಸುವಂತೆ ಡಿ.ಕೆ. ಶಿವಕುಮಾರ್ ಆಗ್ರಹ…

admin by admin
May 23, 2020
in Newsbeat, Politics, ರಾಜಕೀಯ
D K shivkumar
Share on FacebookShare on TwitterShare on WhatsappShare on Telegram

ಬೆಂಗಳೂರು : ಗ್ರಾಮ ಪಂಚಾಯತಿಗಳ ಚುನಾವಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಅಧಿಕಾರವಿಲ್ಲದಿದ್ದರೂ ಕಾನೂನುಬಾಹಿರವಾಗಿ ಚುನಾವಣಾ ಆಯೋಗವನ್ನು ಕಟ್ಟಿಹಾಕಲು ಮುಂದಾಗಿದೆ. ಹೀಗಾಗಿ ಕಾನೂನು ರೀತಿಯಲ್ಲಿ ಚುನಾವಣೆಯನ್ನು ನಡೆಸಬೇಕು ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಪ್ರೆಸಿಡೆಂಟ್ ಡಿಕೆ ಶಿವಕುಮಾರ್ ಒತ್ತಾಯಿಸಿದ್ದಾರೆ.

ಗ್ರಾಮ ಪಂಚಾಯಿತಿಗಳಿಗೆ ಸದಸ್ಯರ ನಾಮ ನಿರ್ದೇಶನ ಮಾಡಲು ಅವಕಾಶ ನೀಡದಂತೆ ಹಾಗೂ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ರಾಜ್ಯ ಸರಕಾರಕ್ಕೆ ಸೂಚನೆ ನೀಡುವಂತೆ ಒತ್ತಾಯಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ನಿಯೋಗವು ಬೆಂಗಳೂರಿನ ಕನ್ನಿಂಗ್ ಹ್ಯಾಂ ರಸ್ತೆಯಲ್ಲಿರುವ ರಾಜ್ಯ ಚುನಾವಣೆ ಆಯುಕ್ತರಿಗೆ ಮನವಿ ನೀಡಲಾಗಿದೆ. ಈ ಬಗ್ಗೆ ಮಾತನಾಡಿದ ಡಿಕೆ ಶಿವಕುಮಾರ್,

Related posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

August 14, 2026
ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

August 14, 2026

ಪಂಚಾಯತಿ ಚುನಾವಣೆಗಳು ಯಾವುದೇ ಪಕ್ಷದ ಚಿಹ್ನೆ ಅಡಿಯಲ್ಲಿ ನಡೆಯುವುದಿಲ್ಲ. ಹೀಗಾಗಿ ಈಗ ಇರುವ ಸದಸ್ಯರುಗಳನ್ನೇ ಚುನಾವಣೆ ನಡೆಯುವವರೆಗೂ ಮುಂದುವರಿಸಿ ಎಂದು ನಾವು ಮನವಿ ಮಾಡಿದ್ದೇವೆ. ಆದರೂ ರಾಜ್ಯ ಸರ್ಕಾರ ತನ್ನ ಅಧಿಕಾರ ದುರುಪಯೋಗ ಮಾಡಿಕೊಂಡು ಉಪ ಆಯುಕ್ತರ ಮೂಲಕ ಕೋವಿಡ್ ನೆಪ ನೀಡಿ ಚುನಾವಣೆಯನ್ನು ನಡೆಸದೇ ತಮಗೆ ಬೇಕಾದವರನ್ನು ಆಯ್ಕೆ ಮಾಡಿಕೊಳ್ಳಲು ಸಂವಿಧಾನದ ಉಲ್ಲಂಘನೆ ಮಾಡುತ್ತಿದ್ದಾರೆ.

ಚುನಾವಣಾ ಆಯೋಗವು ಮಾರ್ಚ್ 7ರಂದೇ ಗ್ರಾಮ ಪಂಚಾಯತಿ ಚುನಾವಣೆಗಳ ತಯಾರಿ ಮಾಡಿಕೊಳ್ಳಿ ಎಂದು ಸಂದೇಶ ನೀಡಿತ್ತು. ಅದಾದ ಮೇಲೆ ಕೋವಿಡ್ ವಿಚಾರದಿಂದ ಚುನಾವಣೆಯನ್ನು ಮುಂದೂಡಲು ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಂಡಿದೆ. ಆ ಮೂಲಕ ಚುನಾವಣಾ ಆಯೋಗದ ಕೈ ಕಟ್ಟಿಹಾಕುವ ಪ್ರಯತ್ನ ನಡೆಸಲಾಗಿದೆ. ಸರ್ಕಾರವು ಉಪ ಆಯುಕ್ತರುಗಳಿಗೆ ಚುನಾವಣೆ ಸಿದ್ಧತೆ ಪ್ರಕ್ರಿಯೆ ಪಕ್ಕಕ್ಕಿಡಿ. ಮತದಾರರ ಪಟ್ಟಿ ಸಿದ್ಧಪಡಿಸುವುದು ಸೇರಿದಂತೆ ಇತರ ವಿಚಾರಗಳನ್ನು ಕೈಬಿಟ್ಟು ಕೋವಿಡ್ ಕಡೆ ಗಮನ ಹರಿಸಿ ಎಂದು ನಿರ್ದೇಶನ ನೀಡಿದೆ. ಕೋವಿಡ್ ಕೆಲಸ ಮಾಡಲಿ, ಬೇಡ ಎನ್ನುವುದಿಲ್ಲ. ಆದರೆ ಅದನ್ನೇ ನೆಪವಾಗಿಟ್ಟುಕೊಂಡು ಸಂವಿಧಾನವನ್ನೇ ಮುಗಿಸಿ ಪಕ್ಷದ ಕಾರ್ಯಕರ್ತರನ್ನು ಪಂಚಾಯತಿಗಳಿಗೆ ನೇಮಕ ಮಾಡಿಕೊಳ್ಳುವ ಪ್ರಯತ್ನವನ್ನು ನೋಡಿಕೊಂಡು ನಾವು ಸುಮ್ಮನೆ ಕೂರಲು ತಯಾರಿಲ್ಲ.

ಪಂಚಾಯಿತಿ ಚುನಾವಣೆಗಳು ಪಕ್ಷಾತೀತವಾಗಿ ನಡೆಯುತ್ತವೆ. ಹೀಗಾಗಿ ಸರ್ಕಾರ ಈ ವಿಚಾರದಲ್ಲಿ ಯಾಕೆ ಹೆದರುತ್ತಿದೆ, ತಮ್ಮ ಪಕ್ಷದ ಕಾರ್ಯಕರ್ತರನ್ನು ಕೂರಿಸುವ ಪ್ರಯತ್ನಕ್ಕೆ ಮುಂದಾಗಿದೆ ಎಂಬುದೇ ಗೊತ್ತಾಗುತ್ತಿಲ್ಲ.
ಇದರ ಬಗ್ಗೆ ಯಾವ ರೀತಿ ಸಮಗ್ರ ಹೋರಾಟ ಮಾಡಲು ಸಾಧ್ಯವೋ ಅದನ್ನು ಮಾಡುತ್ತೇವೆ. ಸರ್ಕಾರ ಆಯೋಗಕ್ಕೆ ಸಲಹೆ ನೀಡಿರಬಹುದು. ಆದರೆ ಆಯೋಗವು ಸಂವಿಧಾನಿಕ ಸ್ವಾಯತ್ತ ಸಂಸ್ಥೆಯಾಗಿದ್ದು, ಸರ್ಕಾರಕ್ಕಿಂತ ಮಿಗಿಲಾಗಿದೆ. ಹೀಗಾಗಿ ಆಯೋಗ ಸಂವಿಧಾನದ ಪ್ರಕಾರ ನಡೆದುಕೊಂಡು, ಅದನ್ನು ರಕ್ಷಣೆ ಮಾಡಬೇಕು. ನಿಮ್ಮನ್ನು ಯಾರೂ ಪ್ರಶ್ನೆ ಮಾಡಲು ಸಾಧ್ಯವಿಲ್ಲ ಎಂದು ನಾವು ಮನವಿ ಮಾಡಿದ್ದೇವೆ. ಆ ಕೆಲಸ ಮಾಡುತ್ತೇವೆ ಎಂದು ಆಯೋಗದ ಅಧಿಕಾರಿಗಳು ಭರವಸೆ ನೀಡಿದ್ದಾರೆ. ಸರ್ಕಾರಗಳು ಪಂಚಾಯತ್ ವ್ಯವಸ್ಥೆಯನ್ನು ಕೇಸರೀಕರಣ ಮಾಡಲು ನಾವು ಬಿಡುವುದಿಲ್ಲ. ಪಂಚಾಯತ್ ವ್ಯವಸ್ಥೆ ವಿಚಾರದಲ್ಲಿ ರಾಜ್ಯವು ದೇಶಕ್ಕೆ ಮಾದರಿಯಾಗಿದ್ದು, ನಮ್ಮ ಸಂಪ್ರದಾಯವನ್ನು ನಾವು ಉಳಿಸಿಕೊಂಡು ಹೋಗಬೇಕಿದೆ. ಇದು ಆಯೋಗದ ಜವಾಬ್ದಾರಿಯೂ ಆಗಿದೆ. ಒಂದು ವೇಳೆ ಸರ್ಕಾರ ಈ ವಿಚಾರದಲ್ಲಿ ಅಧಿಕಾರ ದುರುಪಯೋಗ ಮಾಡಿಕೊಂಡರೆ ನಾವು ಮುಂದೆ ಯಾವ ರೀತಿ ಹೋರಾಟ ಮಾಡಬೇಕೋ ಅದನ್ನು ಮಾಡುತ್ತೇವೆ. ಇದೇ ವೇಳೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಎಫ್.ಐ.ಆರ್ ದಾಖಲಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು,
ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಎಫ್ಐಆರ್ ದಾಖಲಿಸುವ ಮೂಲಕ ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ಹೆದರಿಸಲು ಮುಂದಾಗಿದೆ. ನಮಗೆ ಈ ದೇಶದ ಕಾನೂನು ಚೆನ್ನಾಗಿ ಗೊತ್ತಿದೆ. ನಾವು ಹೆದರುವುದಿಲ್ಲ. ಏನೇ ಸವಾಲು ಬಂದರೂ ಅದನ್ನು ಎದುರಿಸಲು ಸಿದ್ಧವಿದ್ದೇವೆ. ಪ್ರತಿಪಕ್ಷವಾಗಿ ನಮಗೆ ಯಾವ ಹಕ್ಕಿದೆ, ಸಂವಿಧಾನ ನಮಗೆ ಯಾವ ಸ್ವಾತಂತ್ರ್ಯ ನೀಡಿದೆ ಎಂಬುದು ತಿಳಿದಿದೆ. ನಿನ್ನೆ ಮುಖ್ಯಮಂತ್ರಿಗಳನ್ನು ಭೇಟಿಯಾದಾಗ ಎಫ್ಐಆರ್ ಅನ್ನು ಹಿಂಪಡೆದು ಬಿ ರಿಪೋರ್ಟ್ ಸಲ್ಲಿಸಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ಹೇಳಿದರು.

Tags: gram panchayats
ShareTweetSendShare
Join us on:

Related Posts

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

ರೇಷನ್ ಕಾರ್ಡ್ ಹೊಂದಿರುವವರಿಗೆ ಬಿಗ್ ಶಾಕ್: ಈ ಕೆಲಸ ಮಾಡದಿದ್ದರೆ ಮುಂದಿನ ತಿಂಗಳಿಂದ ಪಡಿತರ ಬಂದ್!

by Shwetha
August 14, 2026
0

ಬೆಂಗಳೂರು: ರಾಜ್ಯದ ಬಿಪಿಎಲ್, ಎಪಿಎಲ್ ಹಾಗೂ ಅಂತ್ಯೋದಯ ಪಡಿತರ ಚೀಟಿದಾರರಿಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಅತಿ ಮುಖ್ಯವಾದ ಸೂಚನೆಯೊಂದನ್ನು ನೀಡಿದೆ. ರೇಷನ್ ಕಾರ್ಡ್‌ನಲ್ಲಿ ಹೆಸರಿರುವ...

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಮಾಫಿ ಸಾಕ್ಷಿ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್

by Shwetha
August 14, 2026
0

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್‌ವುಡ್ ನಟ ದರ್ಶನ್ ಅವರು ಇದೀಗ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಪ್ರಕರಣದ ಮತ್ತೊಬ್ಬ ಆರೋಪಿ ಪ್ರದೋಷ್‌ರನ್ನು ಮಾಫಿ ಸಾಕ್ಷಿ...

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

ಪರಪ್ಪನ ಅಗ್ರಹಾರದಲ್ಲಿ ಪ್ರಜ್ವಲ್ ರೇವಣ್ಣ ನೈಟ್ ಶೋ: ಸರ್ಕಾರ ನಿಮ್ಮದೇ ಇದೆ, ಇಷ್ಟಬಂದಂತೆ ತನಿಖೆ ಮಾಡಿಸಿ- ಪ್ರಜ್ವಲ್ ಜೈಲು ರಂಪಾಟಕ್ಕೆ ಎಚ್‌ಡಿ ರೇವಣ್ಣ ತಿರುಗೇಟು

by Shwetha
August 14, 2026
0

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ, ಜೈಲಿನ ಸೆಲ್‌ನಲ್ಲಿ ಆರಾಮವಾಗಿ ಕುಳಿತು ಮೊಬೈಲ್...

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

ವಿಪಕ್ಷಗಳ ಗದ್ದಲದ ನಡುವೆ ಲೋಕಸಭೆ ಅನಿರ್ದಿಷ್ಟಾವಧಿಗೆ ಮುಂದೂಡಿಕೆ

by Shwetha
August 14, 2026
0

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಅಯೋಧ್ಯೆಯ ರಾಮಮಂದಿರದ ದೇಣಿಗೆ ಕಳ್ಳತನದ ಆರೋಪಗಳ ಕುರಿತು ವಿರೋಧ ಪಕ್ಷಗಳ ಪ್ರತಿಭಟನೆ ಮತ್ತು ಚರ್ಚೆಯಿಲ್ಲದೆ ಪ್ರಮುಖ ಮಸೂದೆಗಳ ಅಂಗೀಕಾರದ ಆರೋಪಗಳ...

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

ದಲಿತನೆಂಬ ಕಾರಣಕ್ಕೆ ವೇದಿಕೆಯನ್ನು ಗಂಗಾಜಲದಿಂದ ಶುದ್ಧೀಕರಣ: ಸಂಸತ್ತಿನಲ್ಲಿ ಭಾವುಕರಾದ ಖರ್ಗೆ, ಬಿಜೆಪಿಗೆ ಶೇಮ್ ಶೇಮ್ ಸ್ಲೋಗನ್ ಚಾಟಿಯೇಟು!

by Shwetha
August 14, 2026
0

ನವದೆಹಲಿ: ಎಐಸಿಸಿ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಭಾಷಣ ಮಾಡಿ ತೆರಳಿದ ನಂತರ, ಆ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram