ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 9 ಮಂದಿ ಸೋಂಕಿತರಲ್ಲಿ, ಇಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 9 ಮಂದಿ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದ್ದು, ಇಲ್ಲಿಯವರೆಗೆ 12 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಜಿಲ್ಲಾಡಳಿತದ ಪತ್ರಿಕಾ ಪ್ರಕಟಣೆಯ ಪ್ರಕಾರ, 8 ಮಂದಿ ಕೊರೊನಾ ಸೋಂಕಿತರು ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. 80 ವರ್ಷದ ಕುಲಶೇಖರ ಮಹಿಳೆ ರೋಗಿ ಸಂಖ್ಯೆ 507 ಮತ್ತು 58 ವರ್ಷದ ಬೋಳೂರು ಮಹಿಳೆ ರೋಗಿ ಸಂಖ್ಯೆ 536ರ ಸ್ಥಿತಿ ಗಂಭೀರವಾಗಿದ್ದು, ಐಸಿಯುಗೆ ದಾಖಲಿಸಲಾಗಿದೆ.
ಇಲ್ಲಿಯವರೆಗೆ ಒಟ್ಟು 40,224 ಮಂದಿ ಸ್ಕ್ರ್ರೀನಿಂಗ್ಗೊಳಪಟ್ಟಿದ್ದು, 28 ಮಂದಿ ಎನ್ಐಟಿಕೆ ಸುರತ್ಕಲ್ನಲ್ಲಿ ಕ್ವಾರಂಟೈನ್ನಲ್ಲಿದ್ದಾರೆ. ಇಎಸ್ಐ ಹಾಸ್ಪಿಟಲ್ನಲ್ಲಿ 40 ಮಂದಿ ಕ್ವಾರಂಟೈನ್ನಲ್ಲಿದ್ದು, ಇಲ್ಲಿಯ ತನಕ 6073 ಮಂದಿ ಹೋಂ ಕ್ವಾರಂಟೈನ್ ಮುಗಿಸಿದ್ದಾರೆ ಎಂಬುವುದಾಗಿ ದ.ಕ. ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.
ಕುಮಾರಸ್ವಾಮಿ ಅವರ 10 ಪ್ರಶ್ನೆಗೆ ಪ್ರಿಯಾಂಕ್ ಖರ್ಗೆ ನೀಡಿದ ಒಂದೇ ಒಂದು ಸವಾಲು ಏನು: KPSC ಅಕ್ರಮದ ಅಸಲಿ ಮುಖವಾಡ ಕಳಚಿದ ಖರ್ಗೆ!
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತು ಸಚಿವ ಪ್ರಿಯಾಂಕ್ ಖರ್ಗೆ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಎಂಜಿನಿಯರ್ ಹುದ್ದೆಗಳ...








