ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸೆಪ್ಟೆಂಬರ್ 15ರ ವರೆಗೆ ಎಲ್ಲ ಗುಂಡಿಗಳನ್ನು ಮುಚ್ಚಬೇಕು. ಮುಚ್ಚದಿದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಸಾರ್ವಜನಿಕರಿಂದ ಯಾವುದೇ ದೂರು ಬರಬಾರದು. ಬಂದರೆ ಅಧಿಕಾರಿಗಳೇ ನೇರ ಹೊಣೆ ಮಾಡಿ ಸಸ್ಪೆಂಡ್ ಮಾಡಲಾಗುವುದು ಎಂದು ಬಿಬಿಎಂಪಿ (BBMP) ಅಧಿಕಾರಿಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ (DCM DK Shivakumar) ಹೇಳಿದ್ದಾರೆ.
ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೆಪ್ಟಂಬರ್ 15ರ ವರೆಗೆ ಗಡುವು ಕೊಟ್ಟಿದ್ದೇನೆ. ನಂತರ ನಾನೇ ಸಿಟಿ ರೌಂಡ್ ಹಾಕುತ್ತೇನೆ. ಬೇಗ ಗುಂಡಿ ಮುಚ್ಚಬೇಕು. ಏನಾದರೂ ಸಮಸ್ಯೆಯಾದರೆ ಎಷ್ಟು ಜನ ಅಧಿಕಾರಿಗಳು ಸಸ್ಪೆಂಡ್ ಆಗುತ್ತಾರೆ ಎನ್ನುವುದು ಗೊತ್ತಿಲ್ಲ ಎಂದು ಖಡಕ್ ವಾರ್ನಿಂಗ್ ಮಾಡಿದ್ದಾರೆ.
ಸಿಎಂ ಅಮೆರಿಕ (America) ಪ್ರವಾಸಕ್ಕೆ ತೆರಳುವ ಮುನ್ನ ಬಿಬಿಎಂಪಿ ಅಧಿಕಾರಿಗಳೊಂದಿಗೆ ಮಲ್ಲೇಶ್ವರಂ (Malleshwaram) ಬಿಬಿಎಂಪಿ ಐಪಿಪಿ ಕಚೇರಿಯಲ್ಲಿ ಸಭೆ ನಡೆಸಿದರು. ಈ ವೇಳೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಬಿಎಂಪಿ ವಿಶೇಷ ಆಯುಕ್ತ ಹಾಜರಿದ್ದರು.