ADVERTISEMENT
Tuesday, September 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home Newsbeat

ಪಾರ್ಕ್ ಜಾಗದ ಶೇ.5 ರಷ್ಟು ಬಳಕೆ ಪ್ರಸ್ತಾವನೆ ವಿವರಗಳ ಪರಿಶೀಲನೆ: ಸಿಎಂ ಡಿ.ಕೆ. ಶಿವಕುಮಾರ್

admin by admin
September 1, 2026
in Newsbeat, State, ರಾಜ್ಯ
dk-shivakumar-5-percent-park-land-proposal-lalbagh-drought-declaration

dk-shivakumar-5-percent-park-land-proposal-lalbagh-drought-declaration

Share on FacebookShare on TwitterShare on WhatsappShare on Telegram

ಬೆಂಗಳೂರು, ಉದ್ಯಾನಗಳಲ್ಲಿ ಶೇ.5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು’ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

Related posts

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

September 1, 2026
gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

September 1, 2026

ಲಾಲ್ಬಾಗ್ ನಲ್ಲಿ ಮೆಟ್ರೋಗೆ ಜಾಗ ನೀಡಿರುವುದು ಸೇರಿದಂತೆ ಬೆಂಗಳೂರಿನ ವಿವಿಧೆಡೆ ಜಾಗ ನೀಡಿರುವ ವಿಚಾರಗಳನ್ನೂ ಪರಿಶೀಲಿಸಬೇಕಿದೆ ಎಂದು ಹೇಳಿದರು.

ಬೆಂಗಳೂರಿನ ಉದ್ಯಾನಗಳ ಜಾಗಕ್ಕೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ‘ಯಾರೂ ಆತಂಕಪಡುವ ಅಗತ್ಯವಿಲ್ಲ. ಪಾರ್ಕ್ ಜಾಗವನ್ನು ಹೇಗೆ ರಕ್ಷಿಸಬೇಕು ಎಂಬುದು ನನಗೆ ಗೊತ್ತಿದೆ’ ಎಂದರು.

ಲಾಲ್ಬಾಗ್ ಸೇರಿದಂತೆ ಉದ್ಯಾನಗಳ ಜಾಗದ ಕುರಿತು ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಏನೇನು ಕ್ರಮ ಕೈಗೊಳ್ಳಲಾಗಿದೆ ಎಂಬ ಸಂಪೂರ್ಣ ಮಾಹಿತಿಯನ್ನು ಪಡೆದು ಪರಿಶೀಲಿಸುವುದಾಗಿ ಹೇಳಿದರು. ಈ ವಿಚಾರವನ್ನು ವಿಧಾನಸಭೆಯಲ್ಲಿ ಮತ್ತೊಮ್ಮೆ ಚರ್ಚಿಸಲು ಅವಕಾಶ ಕಲ್ಪಿಸುವುದಾಗಿಯೂ ತಿಳಿಸಿದರು.

ಸಾರ್ವಜನಿಕ ಹಿತದೃಷ್ಟಿಯಿಂದ ನಿರ್ಧಾರ

ʼಪ್ರತಿಪಕ್ಷದ ಸಲಹೆಗಳಿಗೆ ನಾನು ಮುಕ್ತವಾಗಿದ್ದೇನೆ. ಸಾರ್ವಜನಿಕರ ಸಲಹೆಗಳನ್ನೂ ಪರಿಗಣಿಸುತ್ತೇನೆ. ಯಾವುದೇ ಗೊಂದಲ ಸೃಷ್ಟಿಸುವುದು ನನ್ನ ಉದ್ದೇಶವಲ್ಲ. ಸಾರ್ವಜನಿಕರ ದೊಡ್ಡ ಹಿತದೃಷ್ಟಿಯಿಂದಲೇ ನಿರ್ಧಾರ ಕೈಗೊಳ್ಳಲಾಗುವುದು’ ಎಂದು ಸ್ಪಷ್ಟಪಡಿಸಿದರು.

ನಿಯಮಾನುಸಾರ ಪರಿಶೀಲಿಸಿ ಬರ ಪೀಡಿತ ತಾಲ್ಲೂಕು ಘೋಷಣೆ

ರಾಜ್ಯದಲ್ಲಿ ಈಗಾಗಲೇ ಉಪಮುಖ್ಯಂತ್ರಿ ಡಾ. ಜಿ.ಪರಮೇಶ್ವರ್ ಅವರು 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದಾರೆ. ಇನ್ನೂ ಕೆಲವು ತಾಲೂಕುಗಳ ಕುರಿತು ಪರಿಶೀಲನೆ ನಡೆಯುತ್ತಿದ್ದು, ಪ್ರತಿ ತಾಲೂಕಿನಿಂದ ನಿರಂತರವಾಗಿ ವರದಿ ಪಡೆದು, ನಿಯಮಾನುಸಾರ ಪರಿಶೀಲನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿವಕುಮಾರ್ ಅವರು ತಿಳಿಸಿದರು.

ಕೇಂದ್ರ ಸರಕಾರದ ತಂಡ ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಬರ ಪರಿಸ್ಥಿತಿ ಕುರಿತು ಸಮಗ್ರವಾಗಿ ಸಮರ್ಥನೆ ಮಾಡಿಕೊಳ್ಳಬೇಕಿರುವುದರಿಂದ ಬರ ಘೋಷಣೆಯ ಪ್ರಕ್ರಿಯೆಯಲ್ಲಿ ಯಾವುದೇ ತಾಂತ್ರಿಕ ಲೋಪವಾಗದಂತೆ ಎಚ್ಚರಿಕೆ ವಹಿಸಲಾಗುತ್ತಿದೆ ಎಂದು ಹೇಳಿದರು.

ಧಾರವಾಡ, ಗದಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬರ ಘೋಷಣೆಗೆ ಸಂಬಂಧಿಸಿದಂತೆ ಮಾಹಿತಿ ಕೊರತೆ ಕಂಡುಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳಿಂದ ವರದಿ ಪಡೆಯಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸ್ವತಃ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿರುವುದಾಗಿ ತಿಳಿಸಿದ ಅವರು, ಬಾಗಲಕೋಟೆಗೂ ಭೇಟಿ ನೀಡುವುದಾಗಿ ಹೇಳಿದರು.

ಯಾವ ತಾಲೂಕಿನಲ್ಲಿ, ಯಾವ ಜಿಲ್ಲೆಯಲ್ಲಿ ನಿಜವಾಗಿಯೂ ಬರ ಪರಿಸ್ಥಿತಿ ಉಂಟಾಗಿದೆಯೋ ಅದನ್ನು ಪರಿಶೀಲಿಸುತ್ತೇವೆ. ನನಗೆ ನನ್ನದೇ ಕ್ಷೇತ್ರ ಎಂಬ ಯಾವುದೇ ಪ್ರಶ್ನೆಯಿಲ್ಲ. ಬರ ಘೋಷಣೆಗೆ ಕೇಂದ್ರ ಸರಕಾರದ ನಿಯಮಗಳಿವೆ. ಕಂದಾಯ ಇಲಾಖೆ, ಕೃಷಿ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಒಟ್ಟಾಗಿ ಪರಿಶೀಲನೆ ನಡೆಸಿ, ನಿಯಮದ ಪ್ರಕಾರವೇ ಬರಪೀಡಿತ ಪ್ರದೇಶಗಳನ್ನು ಘೋಷಣೆ ಮಾಡಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ರಾಹುಲ್ ವಿರುದ್ಧ ಎಫ್ಐಆರ್ ಗೆ ಖಂಡನೆ

ರಾಹುಲ್ ಗಾಂಧಿ ವಿರುದ್ಧ ಎಫ್ಐಆರ್ ದಾಖಲಿಸಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಇದನ್ನು ರಾಜಕೀಯ ಪ್ರೇರಿತ ಕ್ರಮ ಎಂದು ಎಂದು ಹೇಳಿದರು.
‘ರಾಹುಲ್ ಗಾಂಧಿ ಅವರು ತಪ್ಪೇನು ಮಾಡಿದ್ದಾರೆ ? ಯುವಜನತೆ ಮತ್ತು ದೇಶಕ್ಕಾಗಿ ಹೋರಾಡುವುದು ಅವರ ಹಕ್ಕು. ಅದು ಸಂವಿಧಾನ ನೀಡಿರುವ ಹಕ್ಕು. ಅವರು ಹೋರಾಡುತ್ತಿರುವ ವಿಚಾರದಲ್ಲಿ ನಾವೆಲ್ಲರೂ ಅವರೊಂದಿಗೆ ಇದ್ದೇವೆ’ ಎಂದು ಹೇಳಿದರು.

ಬಿಜೆಪಿ ಪಾದಯಾತ್ರೆಗೆ ಪಕ್ಷದ ಪ್ರತಿತಂತ್ರ
ಬಿಜೆಪಿ ನಡೆಸುತ್ತಿರುವ ಪಾದಯಾತ್ರೆ ಕುರಿತು, ‘ಅವರು ಪಾದಯಾತ್ರೆ ಮಾಡುವುದು ಒಳ್ಳೆಯದೇ. ಅವರು ನೀಡುತ್ತಿರುವುದು ನಮಗೆ ಒಳ್ಳೆಯ ಅವಕಾಶ. ಅದಕ್ಕೆ ಬೇಕಾದ ಪ್ರತಿತಂತ್ರ ರೂಪಿಸಲು ನಮ್ಮ ಪಕ್ಷವೂ ಸಿದ್ಧವಿದೆ’ ಎಂದು ಹೇಳಿದರು.

Tags: #DKShivakumar #KarnatakaCM #BengaluruParks #Lalbagh #ParkLand #BengaluruDevelopment #DroughtDeclaration #KarnatakaDrought #RahulGandhi #BJPPadayatra #KarnatakaPolitics #BengaluruNews #KarnatakaNews
ShareTweetSendShare
Join us on:

Related Posts

bhraṣṭacharada-pitamaharinda-padayatre-shivaraj-tangadagi

ಭ್ರಷ್ಟಾಚಾರದ ಪಿತಾಮಹರಿಂದಲೇ ಪಾದಯಾತ್ರೆ: ಸಚಿವ ಶಿವರಾಜ ಎಸ್ ತಂಗಡಗಿ ಕಿಡಿ

by admin
September 1, 2026
0

ಕೊಪ್ಪಳ: ‘ಭ್ರಷ್ಟಾಚಾರದ ಪಿತಾಮಹರೇ ಪಾದಯಾತ್ರೆ ನಡೆಸುತ್ತಿದ್ದಾರೆ. ಪಾದಯಾತ್ರೆ ನಡೆಸುತ್ತಿರುವ ನಾಯಕರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಯಾಕೆ ಜೈಲಿಗೆ ಹೋಗಿದ್ದರು? ಅಕ್ರಮಗಳ ಹಿನ್ನೆಲೆ ಜೈಲು ಪಾಲಾಗಿದ್ದ...

gadag-drought-second-list-soon-cm-dk-shivakumar

ಶೀಘ್ರವೇ ಬರ ಪೀಡಿತ ತಾಲ್ಲೂಕುಗಳ ಎರಡನೇ ಪಟ್ಟಿ ಪ್ರಕಟ: ಸಿಎಂ ಡಿ ಕೆ ಶಿವಕುಮಾರ್

by admin
September 1, 2026
0

ಗದಗ, "ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ" ಎಂದು ಸಿಎಂ ಡಿ ಕೆ ಶಿವಕುಮಾರ್...

dk-shivakumar-gadag-drought-review-public-service-gram-panchayat-panch-garanti

ಗದಗ ಜಿಲ್ಲೆಯಲ್ಲಿ ಬರ ಪರಿಸ್ಥಿತಿ: ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು – ಡಿ.ಕೆ. ಶಿವಕುಮಾರ್

by admin
September 1, 2026
0

ಗದಗ : ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಸೇರಿದಂತೆ ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಲು ಅಧಿಕಾರಿಗಳು ಕೇಂದ್ರ ಸ್ಥಳದಲ್ಲೇ ವಾಸವಿದ್ದು, ಜನರಿಗೆ ಲಭ್ಯವಾಗಬೇಕು ಎಂದು ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ...

hv-ramesh-suspended-duty-lapse-bengaluru-street-light-maintenance |

ಕರ್ತವ್ಯ ಲೋಪ: ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹೆಚ್. ವಿ. ರಮೇಶ್ ಅಮಾನತು.

by admin
September 1, 2026
0

ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಕಾರ್ಯಪಾಲಕ ಅಭಿಯಂತರರು (ವಿದ್ಯುತ್) ಹುದ್ದೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಹೆಚ್. ವಿ. ರಮೇಶ್ ರವರು ಜವಾಬ್ದಾರಿಯುತ ಅಧಿಕಾರಿಯಾಗಿದ್ದು, ಬೀದಿ ದೀಪಗಳ ನಿರ್ವಹಣೆಯ ಉಸ್ತುವಾರಿಯನ್ನು...

karnataka-apartment-ownership-and-management-bill-2026-krishna-byre-gowda-vidhana-soudha

* “ಬೆಂಗಳೂರು ಸುಧಾರಣೆಯಾಗಬೇಕೆಂದು ನೀವು ಕೆಲಸ ಮಾಡುತ್ತಿಲ್ಲ, ಹಾಳು ಮಾಡಲೆಂದೇ ಕೆಲಸ ಮಾಡುತ್ತಿದ್ದೀರಾ?”

by admin
September 1, 2026
0

  ಬೆಂಗಳೂರು, ಜಿಬಿಎ ವ್ಯಾಪ್ತಿಯ ಎಲ್ಲಾ 5 ನಗರ ಪಾಲಿಕೆಗಳ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಮುಖಚರ್ಯೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • ಈ ಒಂದು ದೀಪವನ್ನು ಮನೆಯಲ್ಲಿ ಮೂರು ಮಂಗಳವಾರ ಶುಕ್ರವಾರ ಹಚ್ಚಿ ನೋಡಿ ಸಾಕು ಸಾಕ್ಷಾತ್ ಮಹಾಲಕ್ಷ್ಮೀ ಮನೆಗೆ ಬರ್ತಾಳೆ..

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram