ಬಿಜೆಪಿ ಸರ್ಕಾರ ದೇಶಕ್ಕೆ ಕೊಟ್ಟ ದೊಡ್ಡ ಬಳುವಳಿ ನಿರುದ್ಯೋಗ : ಡಿ.ಕೆ.ಶಿವಕುಮಾರ್
ಬೆಂಗಳೂರು : ಬಿಜೆಪಿ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಸಮಸ್ಯೆ ಎಂದು ಬಿಜೆಪಿಗರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಕಾಂಗ್ರೆಸ್ ನ ರಾಜಭವನ ಚಲೋ ರ್ಯಾಲಿ ಬಗ್ಗೆ ಬಿಜೆಪಿಗರ ಟೀಕೆಗಳ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡುತ್ತ ಪ್ರತಿಕ್ರಿಯೆ ನೀಡಿದ ಡಿಕೆಶಿ, ನಾವು ರಾಜ್ಯ ಹಾಗೂ ದೇಶದ ರೈತರ ಪರ ಧ್ವನಿ ಎತ್ತಿದ್ದೇವೆ.
ಕೆಲವು ಸಚಿವರು ನಾವು ಅಸ್ತಿತ್ವ ಉಳಿಸಿಕೊಳ್ಳಲು ಮಾಡಿದ್ದೇವೆ, ನಾವು ನಿರುದ್ಯೋಗಿಗಳು ಎಂದಿದ್ದಾರೆ. ನಿಜ, ಬಿಜೆಪಿ ಆಡಳಿತದಲ್ಲಿ ಇಡೀ ದೇಶವೇ ನಿರುದ್ಯೋಗಿಯಾಗಿದೆ. ವಿರೋಧ ಪಕ್ಷವಾದ ನಾವೂ ನಿರುದ್ಯೋಗಿಗಳೇ ಎಂದು ತಿರುಗೇಟು ನೀಡಿದರು.
ಇನ್ನು ನಾವು ಮುಖ್ಯಮಂತ್ರಿಗಳಿಗೆ, ಅವರ ಪದವಿಗೆ, ಹಿರಿತನಕ್ಕೆ ಗೌರವ ನೀಡುತ್ತೇವೆ. ಇವತ್ತೂ ಗೌರವಿಸುತ್ತೇವೆ, ನಾಳೆಯೂ ಗೌರವಿಸುತ್ತೇವೆ. ಅವರ ಪ್ರಕಾರ ನಾವೆಲ್ಲಾ ಸತ್ತ ಕುದುರೆಗಳಂತೆ.
ನಮ್ಮ ಪಕ್ಷವೇ ಇಲ್ಲ ಎಂದು ಸಿಎಂ ವಿರುದ್ಧ ಕಿಡಿಕಾರಿದ ಕನಕಪುರ ಬಂಡೆ, ಇನ್ನು ಸಾಮ್ರಾಟ್ ಅಶೋಕರ ಪ್ರಕಾರ ನಾವು ನಿರುದ್ಯೋಗಿಗಳು.
ಅದು ನಿಜ, ಬಿಜೆಪಿ ಆಡಳಿತದಲ್ಲಿ ದೇಶದ ಎಲ್ಲೆಡೆ ನಿರುದ್ಯೋಗ ಹೆಚ್ಚಾಗಿದ್ದು, ನಾವು ಕೂಡ ನಿರುದ್ಯೋಗಿಗಳಾಗಿದ್ದೇವೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ದೇಶಕ್ಕೆ ಕೊಟ್ಟ ಬಹುದೊಡ್ಡ ಬಳುವಳಿ ನಿರುದ್ಯೋಗ ಸಮಸ್ಯೆ ಎಂದು ರಾಜಾಹುಲಿ, ಸಾಮ್ರಾಟರಿಗೆ ಟ್ರಬಲ್ ಶೂಟರ್ ಡಿಚ್ಚಿ ಕೊಟ್ಟರು.
ಇದೇ ವೇಳೆ ಗೃಹ ಸಚಿವರ ಟ್ರಾಫಿಕ್ ಜಾಮ್ ಹೇಳಿಕೆಗೆ ಪ್ರತಿಕ್ರಿಯಿಸಿ, ನಾವು ಪ್ರತಿಭಟನೆ ಮಾಡಿದ್ದು ಅಸ್ತಿತ್ವಕ್ಕೆ ಅಲ್ಲ, ರಾಜ್ಯ ಹಾಗೂ ದೇಶದ ರೈತರ ಧ್ವನಿ ಪ್ರತಿಬಿಂಬಿಸಲು.
ರಾಜಕಾರಣದಲ್ಲಿ ಏನು ಬೇಕಾದರೂ ಸಾಧ್ಯ. ಸಾಧ್ಯತೆಗಳ ಕಲೆ ರಾಜಕಾರಣ. ವಿಧಾನ ಪರಿಷತ್ ನಲ್ಲಿ ಸಭಾಪತಿಗಳು ಬರುವ ಮುನ್ನ ಬಾಗಿಲು ಹಾಕಿಕೊಂಡು ಕಲಾಪ ನಡೆಸುತ್ತಾರೆ ಎಂದು ನಾವು ನಿರೀಕ್ಷೆ ಮಾಡಿದ್ವೇ ಎಂದು ಬಿಜೆಪಿಗರ ವಿರುದ್ಧ ಹರಿಹಾಯ್ದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel