ಡಿ.ಕೆ.ಶಿವಕುಮಾರ್ ಅವರೇ ನೀವು 3ನೇ ಅಲೆಯ ಕೋವಿಡ್ ಸೂಪರ್ ಸ್ಪ್ರೆಡರ್
ಬೆಂಗಳೂರು : ಕೊರೊನಾ ನಿಯಮಗಳನ್ನು ಗಾಳಿಗೆ ತೂರಿ ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕಾಂಗ್ರೆಸ್ ವತಿಯಿಂದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಈ ಪಾದಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತೀವ್ರ ಸುಸ್ತಾಗಿದ್ದು, ಕೆಮ್ಮು, ನೆಗಡಿಯಿಂದ ಬಳಲುತ್ತಿದ್ದಾರೆ.
ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಇದೀಗ ಈ ಬಗ್ಗೆ ಬಿಜೆಪಿ ಟ್ವೀಟ್ ಮಾಡಿ, ಡಿ.ಕೆ.ಶಿವಕುಮಾರ್ ಅವರೇ ನೀವು 3ನೇ ಅಲೆಯ ಕೋವಿಡ್ ಸೂಪರ್ ಸ್ಪ್ರೆಡರ್ ಎಂದು ಟೀಕಿಸಿದೆ.
ಬಿಜೆಪಿ ತನ್ನ ಟ್ವೀಟ್ ನಲ್ಲಿ..
ಸೀನು, ಕೆಮ್ಮು, ನೆಗಡಿ, ತಲೆನೋವು, ದೇಹದ ಸ್ಥಿಮಿತ ಕಳೆದುಕೊಳ್ಳುವುದು ಕೋವಿಡ್ ಸೋಂಕಿನ ಪ್ರಾಥಮಿಕ ಲಕ್ಷಣ. ಡಿಕೆಶಿ ಅವರೇ ನೀವು ಒಂದನೇ ಅಲೆಯ ತಬ್ಲಿಘಿಗಳ ರೀತಿ ಕೋವಿಡ್ ಹರಡುತ್ತಿದ್ದೀರಾ?
ಮಾನ್ಯ ಡಿ.ಕೆ.ಶಿವಕುಮಾರ್ ಅವರೇ, ನೀವು ಮೂರನೇ ಅಲೆಯ ಕೋವಿಡ್ ಸೂಪರ್ ಸ್ಪ್ರೆಡರ್. ಕಂಡವರ ಮಕ್ಕಳನ್ನು ಗುಂಡಿಗೆ ತಳ್ಳುವ ಹುಂಬತನ ಬಿಟ್ಟು ಬಿಡಿ.
ಶಾಲೆಗಳನ್ನು ಕೊರೋನಾ ಹರಡುವ ಪ್ರಯೋಗಾಲಯವಾಗಿ ಬಳಸಿಕೊಂಡಿದ್ದಕ್ಕೆ ರಾಜ್ಯದ ಜನತೆಯ ಬಳಿ ಕ್ಷಮೆಯಾಚಿಸಿ.
ಇಲ್ಲಿ ಯಾರು ಕೋವಿಡ್ ನಿಯಮ ಪಾಲಿಸುತ್ತಿದ್ದಾರೆ? ಡಿಕೆಶಿ ಅವರು ಪತ್ರಿಕಾ ಗೋಷ್ಠಿಯಲ್ಲಿ ಹೇಳಿದ್ದ ಸಾಮಾಜಿಕ ಅಂತರ, ಮಾಸ್ಕ್ ಎಲ್ಲಿದೆ?
ಕೋವಿಡ್ ಮೊದಲನೇ ಅಲೆ ಹಾಗೂ ಮೂರನೇ ಅಲೆಯ ವಿಸ್ತಾರಕರು ಒಂದೇ ಫ್ರೇಮ್ನಲ್ಲಿದ್ದಾರೆ ಎಂದು ಬರೆದುಕೊಂಡಿದೆ.