ಜಮೀರ್ ಮನೆ ಮೇಲೆ ಇಡಿ ದಾಳಿ : ಡಿ.ಕೆ.ಶಿವಕುಮಾರ್ ಆಕ್ರೋಶ
ಬೆಂಗಳೂರು : ಇಂದು ಬೆಳ್ಳಂ ಬೆಳಿಗ್ಗೆ ಇಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಗೆ ಶಾಕ್ ನೀಡಿದ್ದಾರೆ.
ಇಡಿ ಅಧಿಕಾರಿಗಳು ಜಮೀರ್ ನಿವಾಸ, ಕಚೇರಿ ಮೇಲೆ ದಾಳಿ ನಡೆಸಿದ್ದು, ಇದನ್ನು ಕಾಂಗ್ರೆಸ್ ನಾಯಕರು ರಾಜಕೀಯ ಪ್ರೇರಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
ಈ ಕುರಿತು ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನೋಟಿಸ್ ಕೊಟ್ಟು ವಿಚಾರಣೆ ನಡೆಸಿದ್ದರು.
ಎಲ್ಲದಕ್ಕೂ ಉತ್ತರ ಕೊಟ್ಟಿದ್ದೆ ಎಂದು ಜಮೀರ್ ಹೇಳಿದ್ದರು. ಈಗ ದಾಳಿ ನಡೆಯುವ ಅವಶ್ಯಕತೆ ಇರಲಿಲ್ಲ. ಈಗ ಕಿರುಕುಳ ನೀಡುತ್ತಿರೋದು ಯಾಕೆ ಎಂದು ಪ್ರಶ್ನಿಸಿದ್ದಾರೆ.
ಮುಂದುವರೆದು ಮಾತನಾಡಿದ ಡಿಕೆಶಿ, ಈ ಕಿರುಕುಳ ಹೇಗೆ ಇರುತ್ತೆ ನಂಗೂ ಗೊತ್ತಿದೆ. ಈಗ ತೊಂದರೆ ಕೊಡುತ್ತಿರುವುದು ಸರಿ ಇಲ್ಲ. ಯಾರ ಅನುಕೂಲಕ್ಕೆ ಈ ದಾಳಿ ನಡೆದಿದೆ ಗೊತ್ತಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಇತ್ತ ಕಳೆದ 8 ಗಂಟೆಯಿಂದ ಜಮೀರ್ ಮನೆಯಲ್ಲಿ ಇಡಿ ಅಧಿಕಾರಿಗಳು ತಲಾಶ್ ಮಾಡುತ್ತಿದ್ದು, ಮಹತ್ತರ ದಾಖಲೆಗಳನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.