7 ಜನ್ಮ ಎತ್ತಿದ್ರೂ ಕಾಂಗ್ರೆಸ್ ಮುಕ್ತ ಕರ್ನಾಟಕ ಅಸಾಧ್ಯ : ಸಿಎಂಗೆ ಡಿಕೆಶಿ ಡಿಚ್ಚಿ
ಬೆಂಗಳೂರು : ಯಡಿಯೂರಪ್ಪ ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ಕರ್ನಾಟಕ ಅಸಾಧ್ಯ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಿಡಿಕಾರಿದ್ದಾರೆ.
ಕಾಂಗ್ರೆಸ್ ದೇಶಕ್ಕೆ ಮಾರಕ ಎಂಬ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಹೇಳಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಡಿಕೆಶಿ, ಬಿಜೆಪಿ ಜನಸೇವಕ ಸಮಾವೇಶದಲ್ಲಿ ಕಾಂಗ್ರೆಸ್ ದೇಶಕ್ಕೆ ಮಾರಕ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಪಾಪ ಅವರಿಗೆ ಅವರ ಪಕ್ಷದಲ್ಲಿರುವವರ ಇತಿಹಾಸ ಗೊತ್ತಿಲ್ಲ. ಏಳು ಜನ್ಮ ಎತ್ತಿದರೂ ಕಾಂಗ್ರೆಸ್ ಮುಕ್ತ ರಾಜ್ಯ ಮಾಡಲಾಗದು ಎಂದು ಟಾಂಗ್ ನೀಡಿದರು.
ಇದೇ ವೇಳೆ ಸಿ.ಡಿ ಬ್ಲಾಕ್ ಮೇಲ್ ವಿಚಾರವಾಗಿ ಮಾತನಾಡಿ, ಬಿಜೆಪಿ ಶಾಸಕರು ಹೇಳಿರುವ ಸಿಡಿ ವಿಚಾರವು ಹಾಲಿ ಹೈಕೋರ್ಟ್ ನ್ಯಾಯಾಧೀಶರಿಂದ ತನಿಖೆಯಾಗಬೇಕು.
ಬಿಜೆಪಿ ಎಂದರೆ ಭಾರತೀಯ ಜನತಾ ಪಾರ್ಟಿ ಅಲ್ಲ, ‘ಬ್ಲಾಕ್ ಮೇಲರ್ಸ್ ಜನತಾ ಪಾರ್ಟಿ’. ಇದನ್ನು ಬಿಜೆಪಿ ನಾಯಕರೇ ಹೇಳಿದ್ದಾರೆ ಎಂದು ಕುಟುಕಿದ್ದಾರೆ.
ತಿಂಗಳಲ್ಲಿ ಮೂರು ಬಾರಿ ಪೆಟ್ರೋಲ್ -ಡೀಸೆಲ್ ಬೆಲೆ ಏರಿಕೆ ಆಗಿದೆ ಇವುಗಳನ್ನು ವಿರೋಧಿಸಿ ದೊಡ್ಡ ಪ್ರಮಾಣದ ಹೋರಾಟ ಹಮ್ಮಿಕೊಳ್ಳಲಾಗಿದೆ.
ರೈತರಿಗೆ ಶಕ್ತಿ ತುಂಬಲು ಕಾಂಗ್ರೆಸ್ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದು ಜ. 20 ರಂದು ರಾಜಭವನ ಮುತ್ತಿಗೆ ಹಾಕಲಿದ್ದೇವೆ ಎಂದು ಇದೇ ವೇಳೆ ಶಿವಕುಮಾರ್ ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel