ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಟೀಕೆ ಮಾಡಿದ್ದಾರೆ.
ಕಲಬುರಗಿಯಲ್ಲಿ ಮಾತನಾಡಿದ ಅವರು, ಡಿಕೆಶಿ ಈಗ ಒಂದು ಕಾಲು ಬಿಜೆಪಿ ಕಡೆಗೆ ಇಟ್ಟಿದ್ದಾರೆ. ಡಿಕೆಶಿ ಪಾಪ, ‘ನಮಸ್ತೆ ಸದಾ ವತ್ಸಲೇ ಮಾತೃಭೂಮಿ’ ಅನ್ನೋದನ್ನು ಬಿಟ್ಟು, ‘ನಮಸ್ತೆ ಸೋನಿಯಾ ಮಾತೆ, ಇಟಲಿ ಕಾ ಪುತ್ರಿ’ ಎಂದು ಹೇಳಿದ್ದರೆ, ಸಿದ್ದರಾಮಯ್ಯ ಅವರನ್ನು ತಕ್ಷಣ ಸಿಎಂ ಸ್ಥಾನದಿಂದ ಕೆಳಗಿಳಿಸಿ, ಡಿಕೆಶಿಯನ್ನು ಸಿಎಂ ಮಾಡುತ್ತಿದ್ದರು, ಎಂದು ವ್ಯಂಗ್ಯವಾಡಿದ್ದಾರೆ.
ಯತ್ನಾಳ್ ಅವರ ಈ ಹೇಳಿಕೆ ಮತ್ತೆ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ್ದು, ಡಿಕೆಶಿ ಭವಿಷ್ಯದ ರಾಜಕೀಯ ಹೆಜ್ಜೆಗಳ ಬಗ್ಗೆ ಊಹಾಪೋಹಗಳು ತೀವ್ರಗೊಂಡಿವೆ.








