ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ ಅಂದರೆ ಕ್ರಮ ಕೈಗೊಳ್ಳಬೇಕು : ಡಿಕೆ ಶಿವಕುಮಾರ
ಬೆಂಗಳೂರು: ರಾಜ್ಯದ ಗೃಹಸಚಿವರು ಮತ್ತು ಮುಖ್ಯಮಂತ್ರಿಗಳು, ಈಶ್ವರಪ್ಪನವರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ, ರಾಜ್ಯದಲ್ಲಿ ಡಿಜಿಪಿ ಬದುಕಿದ್ದಾರೆ ಅಂದರೆ ಕ್ರಮ ಕೈಗೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.
ಕೆಪಿಸಿಸಿ ಕಛೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ವಿಚಾರದಲ್ಲಿ ಕಾನೂನು ಕ್ರಮ ಕೈಗೊಳ್ಳಬೇಕು. ಈ ಪ್ರಕರಣದಲ್ಲಿ ಸತ್ಯ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕೂಡಲೇ ಎಫ್ ಐ ಆರ್ ದಾಖಲಿಸಬೇಕು. ಫ್‍ಐಆರ್ ಆಧಾರದ ಮೇಲೆ ತನಿಖೆ ಕೈಗೊಳ್ಳಬೇಕು ಎಂದರು.
ಅಲ್ಲದೇ ಡೆತ್ ನೋಟ್ ಬಂದಾಗ ಎಫ್‍ಐಆರ್ ದಾಖಲಿಸುತ್ತಾರೆ. ಇಂತಹ ಕೇಸ್ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಾರೆ. ಹಾಗಾಗಿ ಪೊಲೀಸರು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ಸಚಿವ ಕೆ.ಎಸ್. ಈಶ್ವರಪ್ಪ ವಿರುದ್ಧ ಶೇಕಡಾ 40 ಪರ್ಸೆಂಟೇಜ್ ಆರೋಪ ಮಾಡಿದ್ದ ಬೆಳಗಾವಿ ಬಿಜೆಪಿ ಕಾರ್ಯಕರ್ತ ಹಾಗೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಾಧ್ಯಮದ ಪ್ರತಿನಿಧಿಗಳಿಗೆ ಇಂದು ವಾಟ್ಸಪ್ ಸಂದೇಶ ರವಾನಿಸಿ ಉಡುಪಿಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.








