ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆ ಮುಂದುವರಿದಿದೆ ಎಂದು ಸುಗುಣಾ ಆಸ್ಪತ್ರೆಯ ವೈದ್ಯರು ಸ್ಪಷ್ಟಪಡಿಸಿದ್ದಾರೆ.
![]()
ರಾಜಾಜಿನಗರದ ಸುಗುಣ ಆಸ್ಪತ್ರೆಯ ವೈದ್ಯರು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದ್ದು, ಕಳೆದ ರಾತ್ರಿ ಜ್ವರ ಮತ್ತು ಮಲೇರಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದಂತ ಡಿ.ಕೆ.ಶಿವಕುಮಾರ್ ಅವರನ್ನು ಕೊರೊನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷೆಯ ವರದಿಯಲ್ಲಿ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದ್ದು, ಅವರನ್ನು ತಜ್ಞ ವೈದ್ಯರ ತಂಡ ಮಾನಿಟರ್ ಮಾಡುತ್ತಿದೆ ಎಂದು ತಿಳಿಸಿದ್ದಾರೆ.









