ಕೋಲಾರ : ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ ಎಂದು ಹೇಳಿಕೆ ನೀಡಿದ್ದ ಡಿ.ಕೆ ಶಿವಕುಮಾರ್ ಅವರಿಗೆ ಕೆ.ಎಸ್.ಈಶ್ವರಪ್ಪ ಟಾಂಗ್ ನೀಡಿದ್ದಾರೆ.. ಕೋಲಾರದಲ್ಲಿ ಮಾತನಾಡಿದ ಅವರು, “ಹೊಸದಾಗಿ ಕೆಪಿಸಿಸಿ ಅಧ್ಯಕ್ಷರಾಗಿರುವುದನ್ನು ತೋರಿಸಿಕೊಳ್ಳಲು ಡಿ.ಕೆ.ಶಿವಕುಮಾರ್ ಹೀಗೆ ನಾಟಕ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರ ಕೊರೊನಾ ಸೋಂಕು ಹರಡದಂತೆ ತಡೆಯುವಲ್ಲಿ ಯಶಸ್ವಿಯಾಗಿದೆ. ಜನ ಲಾಕ್ ಡೌನ್ ಗೆ ಸಂಬಂಧಿಸಿದಂತೆ ಸರ್ಕಾರದ ಜೊತೆ ಇದ್ದಾರೆ. ಡಿ.ಕೆ.ಶಿವಕುಮಾರ್ ಆರೋಪದಲ್ಲಿ ಹುರುಳಿಲ್ಲ” ಎಂದು ಕಿಡಿಕಾರಿದ್ದಾರೆ
ಇನ್ನು “ಕೊರೊನಾ ವಿಚಾರದಲ್ಲಿ ಡಿಕೆಶಿ ಬಹಳ ನಾಟಕ ಆಡುತ್ತಿದ್ದಾರೆ. ಇಷ್ಟು ದಿನ ಈಶ್ವರಪ್ಪ ಎಲ್ಲಿ ಮಲಗಿದ್ದಾರೆ ಎಂದು ಕೇಳುವ ಡಿಕೆಶಿ ಅವರು ಇಷ್ಟು ದಿನ ಎಲ್ಲಿ ಮಲಗಿದ್ರು ಅಂತ ಗೊತ್ತಿದೆ. ನಾನು ಅಲ್ಪ ಸಂಖ್ಯಾತರ ಪರವಾಗಿದ್ದೇನೆ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ. ಬಿಜೆಪಿ ಎಂದೂ ಕೋಮು ಭಾವನೆ ಸೃಷ್ಟಿಸಲು ಬಿಡುವುದಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.