ಬೀದರ್ : ಮೊದಲಿನಿಂದಲೂ ಡಿ.ಕೆ ಶಿವಕುಮಾರ್ ವಿರುದ್ಧ ಕೆಂಡಕಾರುತ್ತಿರುವ ಬೆಳಗಾವಿ ಸಾಹುಕಾರ್ ರಮೇಶ್ ಜಾರಕಿಹೊಳಿ ಇಂದು ನಾಲಿಗೆ ಹರಿಬಿಟ್ಟಿದ್ದಾರೆ. ಬೀದರ್ ನ ಕಾರಂಜಾ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಮುಕ್ತ ಕರ್ನಾಟಕ ಘೋಷಣೆ ಮಾಡಿರುವ ಕೆಪಿಸಿಸಿ ನೂತನ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಎಷ್ಟು ಗಂಡಸು ಅಂತ ಗೊತ್ತಿದೆ ಎಂದು ವ್ಯಂಗ್ಯವಾಡಿದರು.
ಇದೇ ವೇಳೆ ಶಾಸಕರ ಅನುದಾನ ಬಿಡುಗಡೆಗೆ ಪರ್ಸಂಟೇಜ್ ಪಡೆಯಲಾಗುತ್ತಿದೆ ಎಂಬ ಸಿದ್ದರಾಮಯ್ಯ ಅವರ ಆರೋಪದ ಬಗ್ಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ನಾನು ಯಾವುದೇ ಪಕ್ಷದಲ್ಲಿದ್ದರೂ ಮಾಜಿ ಸಿಎಂ ಸಿದ್ದರಾಮಯ್ಯ ಅವರೇ ನಮ್ಮ ನಾಯಕರು. ಅವರ ಬಗ್ಗೆ ನಾನು ಮಾತನಾಡುವುದಿಲ್ಲ ಎಂದರು.
ಗೋದಾವರಿ ಬೇಸ್ ನ ತನ್ನ ಪಾಲಿನ ನೀರು ಸದ್ಬಳಕೆಗಾಗಿ ಬೀದರ ಜಿಲ್ಲೆಯಲ್ಲಿ ಹೊಸದಾಗಿ ಬಾಂದಾರ ಸೇತುವೆಗಳ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗುತ್ತಿದೆ. ಈಗಾಗಲೇ ನಿರ್ಮಿಸಿರುವ ಬ್ಯಾರೇಜ್ ಗಳನ್ನು ಸರಿಪಡಿಸಲಾಗಿದ್ದು, ಈಗ ನೀರು ಸಂಗ್ರಹ ಆಗಲಿದೆ ಎಂದು ಜಾರಕಿಹೊಳಿ ಹೇಳಿದರು.








