ರಾಜ್ಯದಲ್ಲಿ ನಗರಾಭಿವೃದ್ಧಿ ಹಾಗೂ ವಸತಿ ಯೋಜನೆಗಳ ಚುರುಕಿಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವಸತಿ ಮತ್ತು ನಗರಾಭಿವೃದ್ಧಿ ನಿಗಮ (HUDCO) ಸಂಸ್ಥೆಯ ಉನ್ನತ ಮಟ್ಟದ ಪ್ರತಿನಿಧಿಗಳ ನಿಯೋಗವು ಶುಕ್ರವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿತು.
ವಿಧಾನಸೌಧದಲ್ಲಿ ನಡೆದ ಈ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ವಿಷಯಗಳ ಕುರಿತು ಚರ್ಚೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್, ಸಿಎಂ ಆರ್ಥಿಕ ಸಲಹೆಗಾರರಾದ ಎಲ್. ಕೆ. ಅತೀಕ್ ಹಾಗೂ ಸಿಎಂ (ಇಂಧನ ಮತ್ತು ಜಲಸಂಪನ್ಮೂಲ) ಸಲಹೆಗಾರರಾದ ವಿಶ್ವನಾಥ್ ರೆಡ್ಡಿ ಅವರು ಉಪಸ್ಥಿತರಿದ್ದರು.
ಅಲ್ಲದೆ, ವಸತಿ ಮತ್ತು ನಗರಾಭಿವೃದ್ಧಿ ನಿಗಮದ (HUDCO) ಅಧ್ಯಕ್ಷರಾದ ಸಂಜಯ್ ಕುಲಶ್ರೇಷ್ಠ ಸೇರಿದಂತೆ ಸಂಸ್ಥೆಯ ಹಲವು ಹಿರಿಯ ಅಧಿಕಾರಿಗಳು ಹಾಗೂ ಪ್ರತಿನಿಧಿಗಳು ಈ ಸಭೆಯಲ್ಲಿ ಭಾಗವಹಿಸಿ, ರಾಜ್ಯದಲ್ಲಿನ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ಕುರಿತು ಸುದೀರ್ಘ ಸಮಾಲೋಚನೆ ನಡೆಸಿದರು.





