ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಭಿಮಾನಿ ಬಳಗದ ಸದಸ್ಯರು ಶಿವಮೊಗ್ಗದಲ್ಲಿ ಹಸಿದವರಿಗೆ ಸಂಚಾರಿ ಕ್ಯಾಂಟೀನ್ ಮೂಲಕ ಹೊಟ್ಟೆ ತುಂಬಿಸುವ ಕೆಲಸ ಮಾಡುತ್ತಿದ್ದಾರೆ.
ಡಿ.ಕೆ ಶಿವಕುಮಾರ್ ಸಂಚಾರಿ ಕ್ಯಾಂಟೀನ್ ಗೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಇಂದು ಚಾಲನೆ ನೀಡಿದರು. ನಗರದ ಆಸ್ಪತ್ರೆಗಳಲ್ಲಿ ಕಾರ್ಯನಿರ್ವಹಿಸುವ ಸ್ಟಾಪ್, ನರ್ಸ್, ಆಸ್ಪತ್ರೆಯಲ್ಲಿ ದಾಖಲಾಗಿರುವ ರೋಗಿಗಳನ್ನು ನೋಡಿಕೊಳ್ಳುವ ಅಟೆಂಡರ್ ಹಾಗೂ ನಗರದಲ್ಲಿ ಆಹಾರಕ್ಕಾಗಿ ಪರಿತಪಿಸುತ್ತಿರುವ ಸಾರ್ವಜನಿಕರ ಅನುಕೂಲಕ್ಕಾಗಿ ಡಿ.ಕೆ.ಶಿ. ಸಂಚಾರಿ ಕ್ಯಾಂಟೀನ್ ಆರಂಭಿಸಲಾಗಿದೆ.
ಪ್ರತಿ ದಿನಕ್ಕೆ 500 ರಿಂದ 600 ಜನರಿಗೆ ಉಪಹಾರ ನೀಡುವ ಯೋಜನೆ ಇದಾಗಿದ್ದು, ಹಸಿದವರಿಗೆ ಈ ಸಂಚಾರಿ ಕ್ಯಾಂಟೀನ್ ಮೂಲಕ ಹೊಟ್ಟೆ ತುಂಬಿಸುವ ಸೇವೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಉಪಹಾರದ ಜೊತೆಗೆ ನೀರಿನ ಬಾಟಲಿಯನ್ನು ಕೂಡ ಉಚಿತವಾಗಿ ವಿತರಣೆ ಮಾಡಲಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಪ್ರಚಾರ ಮಾಡಲಾಗಿದೆ.








