ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೀಡಿರುವ ನೋಟಿಸ್‌ಗೆ ಉತ್ತರಿಸಲು ಕಾಲಾವಕಾಶ ಕೇಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಈ ಕುರಿತು ಮಾತನಾಡಿದ ಅವರು, ನೋಟಿಸ್‌ಗೆ ಸೋಮವಾರವೇ ಉತ್ತರ ನೀಡುವ ಉದ್ದೇಶ ಹೊಂದಿದ್ದೆ ಎಂದು ಹೇಳಿದರು.
ಆದರೆ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರ ನಿಧನದ ಹಿನ್ನೆಲೆಯಲ್ಲಿ ತಕ್ಷಣ ವಿಶೇಷ ವಿಮಾನದಲ್ಲಿ ದಾವಣಗೆರೆಗೆ ತೆರಳಬೇಕಾದ ಅನಿವಾರ್ಯತೆ ಎದುರಾಯಿತು. ಈ ಕಾರಣದಿಂದಾಗಿ ನಿಗದಿತ ಸಮಯದಲ್ಲಿ ದೆಹಲಿ ಪೊಲೀಸರ ಮುಂದೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ಡಿಕೆಶಿ ತಿಳಿಸಿದ್ದಾರೆ.
ವಿಧಾನಸಭಾ ಅಧಿವೇಶನ ಹಾಗೂ ಅಂತ್ಯಕ್ರಿಯೆ ಸಂಬಂಧಿತ ಕರ್ತವ್ಯಗಳು ಮುಗಿದ ಬಳಿಕ ನೋಟಿಸ್‌ಗೆ ವಿವರವಾದ ಉತ್ತರ ನೀಡಲು ಅಧಿಕೃತವಾಗಿ ಕಾಲಾವಕಾಶ ಕೋರುವೆ ಎಂದು ಅವರು ಹೇಳಿದ್ದಾರೆ. ಈ ವಿಚಾರದಲ್ಲಿ ಕಾನೂನಿನ ಪ್ರಕ್ರಿಯೆಗಳಿಗೆ ಸಂಪೂರ್ಣವಾಗಿ ಸಹಕರಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದು, ರಾಜಕೀಯ ಪ್ರೇರಿತ ಆರೋಪಗಳಿಗೆ ತಲೆಕೆಡಿಸಿಕೊಳ್ಳುವುದಿಲ್ಲ ಎಂಬ ಸಂದೇಶವನ್ನೂ ನೀಡಿದ್ದಾರೆ.








