ಕರ್ನಾಟಕ ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು ಬುಧವಾರ ಅಧಿಕೃತವಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ನೂತನ ಮುಖ್ಯಮಂತ್ರಿಗೆ ಪ್ರಮಾಣ ವಚನ ಬೋಧಿಸಿದರು.
ನಾನು ಡಿ.ಕೆ. ಶಿವಕುಮಾರ್ ಹೆಸರಿನವನಾದ ನಾನು… ಎಂದು ಪ್ರಮಾಣ ವಚನ ಸ್ವೀಕರಿಸುವ ಮೂಲಕ ಡಿಕೆಶಿ ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಗೆ ಚಾಲನೆ ನೀಡಿದರು.
ಬೆಂಗಳೂರಿನ ಲೋಕಭವನದಲ್ಲಿ ನಡೆದ ಈ ಐತಿಹಾಸಿಕ ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಹಲವು ಗಣ್ಯರು, ರಾಜಕೀಯ ನಾಯಕರು ಹಾಗೂ ಪಕ್ಷದ ಕಾರ್ಯಕರ್ತರು ಭಾಗವಹಿಸಿದರು.
ಡಿಕೆ ಶಿವಕುಮಾರ್ ಅವರ ಪದಗ್ರಹಣದೊಂದಿಗೆ ರಾಜ್ಯದಲ್ಲಿ ಹೊಸ ನಾಯಕತ್ವದ ಅಧ್ಯಾಯ ಆರಂಭವಾಗಿದ್ದು, ಹೊಸ ಸಚಿವ ಸಂಪುಟ ರಚನೆ ಹಾಗೂ ಆಡಳಿತದ ಮುಂದಿನ ಆದ್ಯತೆಗಳತ್ತ ಇದೀಗ ಎಲ್ಲರ ಗಮನ ನೆಟ್ಟಿದೆ.








