ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಅಭಿಮಾನಿಗಳು ಅಲ್ಲಲ್ಲಿ ಅವರ ಹೆಸರಿನಲ್ಲಿ ಟ್ರಸ್ಟ್ , ಸಂಘಗಳನ್ನು ಮಾಡಿಕೊಂಡಿದ್ದಾರೆ. ಆದ್ರೆ ಇನ್ಮುಂದೆ ಯಾರೂ ಸಹ ನನ್ನ ಹೆಸರು ಬಳಸಿಕೊಂಡು ಟ್ರಸ್ಟ್ ಗಳನ್ನ ಮಾಡುವಂತಿಲ್ಲ ಎಂದು ಸ್ವತಃ ಡಿಕೆ ಶಿವಕುಮಾರ್ ಅವರೇ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ನನ್ನ ಹೆಸರು ಬಳಸಿಕೊಂಡು ಯಾರೂ ಕೂಡ ಅಭಿಮಾನಿಗಳ ಸಂಘ, ಟ್ರಸ್ಟ್, ಮತ್ತಿತರ ಸಂಘಟನೆಗಳನ್ನು ಮಾಡಿಕೊಳ್ಳುವಂತಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈಗಾಗಲೇ ಅಸ್ತಿತ್ವದಲ್ಲಿರುವ ಎಂ ಎಸ್ ಅಂಗಡಿ ನೇತೃತ್ವದ ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್ ಅಭಿಮಾನಿಗಳ ಸಂಘವನ್ನು ಹೊರತುಪಡಿಸಿ ನನ್ನ ಹೆಸರಿನ ಅಭಿಮಾನಿ ಸಂಘ, ಸಂಸ್ಧೆಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವಿಸರ್ಜಿಸಬೇಕು.
ಒಂದೊಮ್ಮೆ ಯಾರಾದರೂ ನನ್ನ ಹಾಗೂ ನನ್ನ ಸಹೋದರ ಡಿ ಕೆ ಸುರೇಶ್ ಹೆಸರಿನ ಸಂಘ ಸಂಸ್ಥೆಗಳ ಮೂಲಕ ಚಟುವಟಿಕೆ ನಡೆಸಿದರೆ, ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಡಿ.ಕೆ ಶಿವಕುಮಾರ್ ಅವರು ಎಚ್ಚರಿಕೆ ನೀಡಿದ್ದಾರೆ.
ಕುಮಾರಸ್ವಾಮಿ ಮೊದಲು ತಮ್ಮ ರಾಜೀನಾಮೆಯ ಅಸಲಿ ಕಥೆ ಬಿಚ್ಚಿಡಲಿ: ನಿಮ್ಮ ಕುಟುಂಬ ನೈಸ್ ನಲ್ಲಿ ಎಷ್ಟು ಭೂಮಿ ಕಬಳಿಸಿದೆ? ಸೋಮಶೇಖರ್ ವಾಗ್ದಾಳಿ
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಈಗ ರಾಜೀನಾಮೆ ಮತ್ತು ಸ್ಟಿಂಗ್ ಆಪರೇಷನ್ ಗಳ ಮಹಾ ಸಮರ ಶುರುವಾಗಿದೆ. ಸಿದ್ದರಾಮಯ್ಯ ಅವರನ್ನು ಸ್ಟಿಂಗ್ ಆಪರೇಷನ್ ಮೂಲಕ ಸಿಎಂ ಸ್ಥಾನದಿಂದ ಕೆಳಗಿಳಿಸಲಾಗಿದೆ...








