ಕನಪುರದಲ್ಲಿ ಇಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕನಕಪುರ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಲಾಯ್ತು. ಸಭೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸದಸ್ಯರಾದ ಡಿಕೆ ಸುರೇಶ್, ವಿಧಾನ ಪರಿಷತ್ ಸದಸ್ಯರಾದ ಎಸ್ ರವಿ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಬಸಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎನ್ ನಾಗಣ್ಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಸಭೆಯಲ್ಲಿ ಕನಕಪುರದ ಅಭಿವೃದ್ಧಿ ಹಾಗೂ ಕೊರೊನಾ ಸೋಂಕಿನ ನಿರ್ಮೂನೆಗೆ ತೆಗೆದುಕೊಂಡಿರುವ ಕ್ರಮಗಳು, ಜಾಗೃತಿ ಮೂಡಿಸುವ ಮಾರ್ಗಗಳ ಬಗ್ಗೆಯೂ ಡಿಕೆಶಿ ಸ್ಥಳೀಯ ನಾಯಕರೊಂದಿಗೆ ಚರ್ಚೆ ನಡೆಸಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ.








