ಐಶ್ವರ್ಯ ಗೌಡ ವಿರುದ್ಧದ ವಂಚನೆ ಪ್ರಕರಣದ ಸಂಬಂಧ ಎನ್‌ಫೋರ್ಸ್ಮೆಂಟ್ ಡೈರೆಕ್ಟರೇಟ್(ED)ನಿಂದ ಸಮನ್ಸ್ ಬಂದಿರುವುದನ್ನು ಮಾಜಿ ಸಂಸದ ಡಿ.ಕೆ. ಸುರೇಶ್ ಖಚಿತಪಡಿಸಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಸಮನ್ಸ್ ಬಂದಿರುವುದು ನಿಜ. ಆದರೆ ನಾನು ಐಶ್ವರ್ಯ ಗೌಡ ಅವರೊಂದಿಗೆ ಯಾವುದೇ ಹಣಕಾಸಿನ ವ್ಯವಹಾರ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.
ED ವಿಚಾರಣೆಗೆ ಹಾಜರಾಗಲು ಸೂಚನೆ:
ED ಅಧಿಕಾರಿಗಳು ಡಿ.ಕೆ. ಸುರೇಶ್ ಅವರಿಗೆ ಜೂನ್ 19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದ್ದರು. ಆದರೆ, ಅವರು ತಾವು ಜೂನ್ 23ರಂದು ವಿಚಾರಣೆಗೆ ಹಾಜರಾಗುವುದಾಗಿ ಅಧಿಕಾರಿಗಳಿಗೆ ತಿಳಿಸಿದ್ದಾಗಿ ಹೇಳಿದರು. ಅವರು ಕೇಳುವ ಎಲ್ಲ ಪ್ರಶ್ನೆಗಳಿಗೆ ನಾನು ಸ್ಪಷ್ಟವಾದ ಉತ್ತರ ನೀಡಲು ಸಿದ್ಧನಿದ್ದೇನೆ ಎಂದೂ DK ಸುರೇಶ್ ಅಭಿಪ್ರಾಯಪಟ್ಟರು.
ರಾಜಕೀಯ ಹಿನ್ನೆಲೆ?
ಈ ಪ್ರಕರಣವು ರಾಜಕೀಯ ಪ್ರೇರಿತವಾಗಿದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸುತ್ತ DK ಸುರೇಶ್, ನಾನು ಯಾವುದೇ ಅಪರಾಧ ಮಾಡಿಲ್ಲ. ನನ್ನ ವಿರುದ್ಧ ಇರುವ ಆರೋಪಗಳು ಸುಳ್ಳು ಮತ್ತು ರಾಜಕೀಯ ಪ್ರೇರಿತವಾಗಿರುವ ಸಾಧ್ಯತೆ ಇದೆ ಎಂದು ಸಂಶಯ ವ್ಯಕ್ತಪಡಿಸಿದರು.
ED ಸಮನ್ಸ್ ಬೆನ್ನಲ್ಲೇ ರಾಜಕೀಯ ಚರ್ಚೆಗಳು:
DK ಸುರೇಶ್ ಅವರಿಗೆ ಸಮನ್ಸ್ ಬಂದಿರುವ ವಿಷಯ ಹೊರಬಿದ್ದ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.