ಮಂಡ್ಯ: ಕೊತ್ವಾಲ್ ರಾಮಚಂದ್ರನ ಹತ್ತಿರ ಡಿಕೆಶಿ ಕೇವಲ 100 ರೂ.ಗೆ ಕೆಲಸ ಮಾಡುತ್ತಿದ್ದ. ಆತ ಕಣ್ಣೀರು ಹಾಕಿರೋದು ಯಾವತ್ತಾದರೂ ನೋಡಿದ್ದೀರಾ? ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Devegowda) ಪ್ರಶ್ನಿಸಿದ್ದಾರೆ.
ಮಂಡ್ಯದ (Mandya) ಚಿನಕುರುಳಿ ಗ್ರಾಮದಲ್ಲಿ ಮಾತನಾಡಿದ ದೇವೇಗೌಡರು, ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಅವರ ಕಣ್ಣೀರಿನ ಬಗ್ಗೆ ಕಾಂಗ್ರೆಸ್ ನಾಯಕರು ಮಾತನಾಡುತ್ತಾರೆ. ನೆಹರು, ಇಂದಿರಾ ಗಾಂಧಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿದ್ದರು. ಅಂತಹ ಪಕ್ಷದ ಅಧ್ಯಕ್ಷರಾಗಿರುವ ಡಿಕೆಶಿ ಯಾವತ್ತಾದರೂ ಜನರಿಗಾಗಿ ಕಣ್ಣೀರು ಹಾಕಿದ್ದಾರಾ? ಎಂದು ಗುಡುಗಿದ್ದಾರೆ.
ರೈತನಿಗೆ ನೋವಾದಾಗ ಹೃದಯ ಮರುಗುತ್ತೆ ಅಂತವರಿಗೆ ಕಣ್ಣೀರು ಬರುತ್ತದೆ. ನನ್ನ ಮೊಮ್ಮಗ ಕಣ್ಣೀರು ಹಾಕಿದರ ಬಗ್ಗೆ ಮಾತಾಡುತ್ತಾರೆ. ನಮ್ಮ ವಂಶವೆ ಕಣ್ಣೀರು ಹಾಕುತ್ತದೆ ನಮ್ಮ ಅಪ್ಪನಿಂದಲೇ ನಮಗೆ ಕಣ್ಣೀರು ಹಾಕೋದು ಬಂದಿದೆ. ಬಡತನವನ್ನು ನಾವು ಅನುಭವಿಸಿದ್ದೇವೆ. ಬಡವರ ಬಗ್ಗೆ ನಮಗೆ ಬೇಗೆ, ನೋವು ಇದೆ ಎಂದು ವಾಗ್ದಾಳಿ ನಡೆಸಿದ್ದಾರೆ.