ಯಾದಗಿರಿ: ಮುಂದಿನ ಮೂರು ತಿಂಗಳಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರು ಚೂರಾಗುತ್ತದೆ ಎಂದು ಬಿಜೆಪಿ ರಾಜ್ಯ ಸಾರಥಿ ನಳಿನ್ ಕುಮಾರ್ ಕಟೀಲ್ ಅವರು ಭವಿಷ್ಯ ನುಡಿದಿದ್ದಾರೆ. ಯಾದಗಿರಿಯಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ ವಿಚಾರವಾಗಿ ಮಾತನಾಡಿದ ಅವರು, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಸೋನಿಯಾ ಗಾಂಧಿ ಅವರ ಜೊತೆ ಚರ್ಚೆ ನಡೆಸಿದ್ದಾರೆ. ಈ ಸಂಬಂಧ ರಾಜ್ಯ ನಾಯಕರುಗಳ ಜೊತೆಯೂ ಚರ್ಚಿಸಿದ್ದಾರೆ, ಆದರೆ ಇದುವರೆಗೂ ಫಲಿತಾಂಶ ಮಾತ್ರ ಹೊರ ಬಿದ್ದಿಲ್ಲ ಎಂದರು.
ಮುಂದಿನ ಮೂರು ತಿಂಗಳಿನಲ್ಲಿ ಕಾಂಗ್ರೆಸ್ ಪಕ್ಷ ಒಡೆದು ಚೂರಾಗುತ್ತದೆ. ಕೆಪಿಸಿಸಿ ಅಧ್ಯಕ್ಷರನ್ನಾಗಿ ಡಿಕೆ ಶಿವಕುಮಾರ್ ಅವರನ್ನು ನೇಮಿಸಿದರೇ ಸಿದ್ದರಾಮಯ್ಯ ಪಕ್ಷ ತೊರೆದು ಹೊಸ ಪಕ್ಷ ಕಟ್ಟುತ್ತಾರೆ. ಒಂದು ವೇಳೆ ಕಾಂಗ್ರೆಸ್ ನಾಯಕರು ಸಿದ್ದರಾಮಯ್ಯ ಅವರ ಮನವೊಲಿಸಲು ಪ್ರಯತ್ನಿಸಿದರೇ, ಆಗ ಪರಮೇಶ್ವರ್ ಅವರು ಪಕ್ಷ ಬಿಡುತ್ತಾರೆ ಎಂದು ಕಟೀಲ್ ಹೇಳಿದ್ದಾರೆ.








