ADVERTISEMENT
Wednesday, April 1, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಎಳಸು ಹೇಳಿಕೆ ನಿಲ್ಲಿಸಿ, ಗೌರವ ಉಳಿಸಿಕೊಳ್ಳಿ:ಸಿದ್ದು ಪುತ್ರನಿಗೆ ಕ್ಲಾಸ್ ತೆಗೆದುಕೊಂಡ ಡಿಕೆಶಿ ಆಪ್ತ

DKS faction hits back at Yathindra's 'Elasu' statement

Shwetha by Shwetha
October 24, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ರಾಮನಗರ: ಮುಖ್ಯಮಂತ್ರಿ ಬದಲಾವಣೆ ಮತ್ತು ಮುಂದಿನ ಸಿಎಂ ಯಾರು ಎಂಬ ಚರ್ಚೆಗೆ ಮತ್ತೊಮ್ಮೆ ಜೀವ ಬಂದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ಕಾಂಗ್ರೆಸ್‌ನಲ್ಲೇ ಆಂತರಿಕ ಅಸಮಾಧಾನದ ಕಿಡಿಯನ್ನು ಹೊತ್ತಿಸಿದೆ. ಸಿದ್ದರಾಮಯ್ಯ ಬಳಿಕ ಸತೀಶ್ ಜಾರಕಿಹೊಳಿ ಕೂಡ ಸಿಎಂ ಆಗಬಹುದು ಎಂಬ ಯತೀಂದ್ರ ಹೇಳಿಕೆಗೆ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ರಾಮನಗರ ಶಾಸಕ ಇಕ್ಬಾಲ್ ಹುಸೇನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಇಂದು ರಾಮನಗರದ ಅಂಕನಹಳ್ಳಿ ಗ್ರಾಮದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತೀಂದ್ರ ಅವರ ಹೇಳಿಕೆಯನ್ನು ‘ಎಳಸು ಸ್ಟೇಟ್‌ಮೆಂಟ್’ ಎಂದು ಬಣ್ಣಿಸುವ ಮೂಲಕ ನೇರ ವಾಗ್ದಾಳಿ ನಡೆಸಿದರು.

Related posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

April 1, 2026
ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

April 1, 2026

‘ನಿಮ್ಮ ಮಾತು ಇನ್ನೂ ಬಲಿತಿಲ್ಲ’

ಯತೀಂದ್ರ ಅವರ ಹೇಳಿಕೆಯ ಕುರಿತು ಆಕ್ರೋಶ ವ್ಯಕ್ತಪಡಿಸಿದ ಇಕ್ಬಾಲ್ ಹುಸೇನ್, “ಅವರೊಬ್ಬರು ಜವಾಬ್ದಾರಿಯುತ ಸ್ಥಾನದಲ್ಲಿರುವವರ ಮಗ. ಇಂತಹ ಎಳಸು ಸ್ಟೇಟ್‌ಮೆಂಟ್‌ಗಳನ್ನು ಕೊಡಬಾರದು. ನಿಮ್ಮ ಮಾತು ಇನ್ನೂ ಬಲಿತಿಲ್ಲ, ನಿಮ್ಮ ಮಾತಿನಲ್ಲಿ ಇನ್ನೂ ಶಕ್ತಿ ಬಂದಿಲ್ಲ. ಇಂತಹ ಹೇಳಿಕೆಗಳಿಂದ ಪಕ್ಷದಲ್ಲಿ ಗೊಂದಲ ಸೃಷ್ಟಿಸುವುದು ಸರಿಯಲ್ಲ. ನೀವು ದೊಡ್ಡ ಮನೆತನದಲ್ಲಿ, ಗೌರವಯುತ ಸ್ಥಾನದಲ್ಲಿದ್ದೀರಿ. ದಯವಿಟ್ಟು ಗೌರವಯುತವಾದ ಹೇಳಿಕೆಗಳನ್ನು ನೀಡಿ. ನೀವಾಗಿ ಕೆಳಗೆ ಬೀಳುವುದು ನಮಗಾರಿಗೂ ಇಷ್ಟವಿಲ್ಲ” ಎಂದು ಖಡಕ್ ಮಾತುಗಳಲ್ಲಿ ಎಚ್ಚರಿಸಿದರು.

‘ನಾವು ಮಾಡಿದ್ರೆ ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ’

ಯತೀಂದ್ರ ಅವರ ಹೇಳಿಕೆಗೆ ಕೆಪಿಸಿಸಿಯಿಂದ ಯಾವುದೇ ನೋಟಿಸ್ ಜಾರಿಯಾಗದ ಕುರಿತು ಕೇಳಿದ ಪ್ರಶ್ನೆಗೆ, ಪಕ್ಷದೊಳಗಿನ ತಾರತಮ್ಯದ ಬಗ್ಗೆ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದರು. “ನಾವು ಮಾಡಿದ್ರೆ ಬಲತ್ಕಾರ, ಬೇರೆಯವರು ಮಾಡಿದ್ರೆ ಚಮತ್ಕಾರ ಎನ್ನುವಂತಹ ಪರಿಸ್ಥಿತಿ ಇದೆ. ಆದರೆ ಆ ಬಗ್ಗೆ ನಾನೇನೂ ಹೆಚ್ಚು ಮಾತನಾಡುವುದಿಲ್ಲ. ಅವರು ಮಾಡಿದ ತಪ್ಪನ್ನು ತಿದ್ದಿಕೊಳ್ಳುತ್ತಾರೆ ಎಂಬ ನಂಬಿಕೆ ನನಗಿದೆ. ಈ ವಿಷಯವಾಗಿ ನನ್ನ ಮೌನವೇ ಉತ್ತರ,” ಎಂದು ಹೇಳಿದರು.

ಪಕ್ಷಕ್ಕಾಗಿ ಡಿಕೆಶಿ ಶ್ರಮ ಅಪಾರ

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಬಲವಾಗಿ ಸಮರ್ಥಿಸಿಕೊಂಡ ಇಕ್ಬಾಲ್ ಹುಸೇನ್, “ಡಿ.ಕೆ. ಶಿವಕುಮಾರ್ ಅವರು ಪಕ್ಷದ ಅಧ್ಯಕ್ಷರಾಗಿ ಅತ್ಯಂತ ಜವಾಬ್ದಾರಿಯುತವಾಗಿ ಕೆಲಸ ಮಾಡುತ್ತಿದ್ದಾರೆ. ಪಕ್ಷವನ್ನು ಸಂಘಟಿಸಲು ಅವರು ಪಡುತ್ತಿರುವ ಶ್ರಮ ಎಲ್ಲರಿಗೂ ತಿಳಿದಿದೆ. ಯೂತ್ ಕಾಂಗ್ರೆಸ್ ಹಂತದಿಂದ ಬಂದು ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಅವರು ನಮಗೆಲ್ಲರಿಗೂ ಶಕ್ತಿ ತುಂಬುವ ಕೆಲಸ ಮಾಡುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಯಾರೂ ಕೂಡ ಗೊಂದಲ ಸೃಷ್ಟಿಸುವ ಹೇಳಿಕೆಗಳನ್ನು ನೀಡಬಾರದು,” ಎಂದು ಯತೀಂದ್ರ ಅವರ ಹೆಸರೆತ್ತದೆ ಚಾಟಿ ಬೀಸಿದರು.

ಹಿನ್ನೆಲೆ ಏನು?

ಕೆಲ ದಿನಗಳ ಹಿಂದೆ ಮಾತನಾಡಿದ್ದ ಮಾಜಿ ಶಾಸಕ ಯತೀಂದ್ರ ಸಿದ್ದರಾಮಯ್ಯ, “ನನ್ನ ತಂದೆ ಸಿದ್ದರಾಮಯ್ಯ ಅವರು ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಅವರ ಬಳಿಕ ಸತೀಶ್ ಜಾರಕಿಹೊಳಿ ಅವರಂತಹ ನಾಯಕರು ಕೂಡ ಮುಖ್ಯಮಂತ್ರಿಯಾಗುವ ಅರ್ಹತೆ ಹೊಂದಿದ್ದಾರೆ,” ಎಂದು ಹೇಳಿದ್ದರು. ಈ ಹೇಳಿಕೆಯು, ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿರುವ ಡಿ.ಕೆ. ಶಿವಕುಮಾರ್ ಅವರ ಬಣವನ್ನು ಕೆರಳಿಸಿದ್ದು, ಇದೀಗ ಇಕ್ಬಾಲ್ ಹುಸೇನ್ ಅವರ ಮೂಲಕ ಬಹಿರಂಗವಾಗಿಯೇ ತಿರುಗೇಟು ವ್ಯಕ್ತವಾಗಿದೆ. ಈ ಘಟನೆಯು ಕಾಂಗ್ರೆಸ್‌ನಲ್ಲಿನ ಸಿಎಂ ಸ್ಥಾನದ ಆಂತರಿಕ ಪೈಪೋಟಿ ಇನ್ನೂ ಜೀವಂತವಾಗಿದೆ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ShareTweetSendShare
Join us on:

Related Posts

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

ಉಪಚುನಾವಣೆ ಕಣದಲ್ಲಿ ಅಚ್ಚರಿಯ ಬೆಳವಣಿಗೆ ಯತ್ನಾಳ್ ಪ್ರಚಾರಕ್ಕೆ ಬಂದರೆ ಮುಕ್ತ ಸ್ವಾಗತ ಎಂದ ಬಿ ಎಸ್ ಯಡಿಯೂರಪ್ಪ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ

by Shwetha
April 1, 2026
0

ರಾಜ್ಯ ರಾಜಕಾರಣದಲ್ಲಿ ಹಾಗೂ ವಿಶೇಷವಾಗಿ ಭಾರತೀಯ ಜನತಾ ಪಾರ್ಟಿಯ ಆಂತರಿಕ ವಲಯದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ನಾಯಕ ಬಿ ಎಸ್ ಯಡಿಯೂರಪ್ಪ ಅವರ ಹೊಸ...

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಮಾಜಿ ಸಿಎಂ ಬಿಎಸ್‌ವೈ ವಿಶ್ವಾಸ

by Shwetha
April 1, 2026
0

ರಾಜ್ಯದಲ್ಲಿ ನಡೆಯಲಿರುವ ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗಳಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ....

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

ಸಮಾಜವಾದಿ ಸಿದ್ದರಾಮಯ್ಯ ಈಗ ಮಜಾರಾಮಯ್ಯ ಸಾಲದರಾಮಯ್ಯ ರಾಜ್ಯ ಸರ್ಕಾರ ಆರ್ಥಿಕ ದಿವಾಳಿ ಆರ್ ಅಶೋಕ್ ತೀವ್ರ ವಾಗ್ದಾಳಿ

by Shwetha
April 1, 2026
0

ದಾವಣಗೆರೆ: ರಾಜ್ಯ ಸರ್ಕಾರದ ಆರ್ಥಿಕ ನಿರ್ವಹಣೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತ ವೈಖರಿ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ತೀವ್ರ ವಾಗ್ದಾಳಿ...

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

SSLC ತೃತೀಯ ಭಾಷೆ ಹಿಂದಿಗೆ ಅಂಕ ಬದಲು ಗ್ರೇಡ್: ಹೊರಟ್ಟಿ ಖಂಡನೆ

by Shwetha
April 1, 2026
0

SSLC ಪರೀಕ್ಷೆಯಲ್ಲಿ ತೃತೀಯ ಭಾಷೆ ಹಿಂದಿಗೆ ಅಂಕಗಳ ಬದಲು ಗ್ರೇಡ್ ನೀಡುವ ಸರ್ಕಾರದ ನಿರ್ಧಾರಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಈ...

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

ತುತ್ತು ಎನ್ನುವ ಬದಲು ಕಚ್ಚುವಿಕೆ ಎಂದ ಬ್ಯಾಟರ್ ಬಾಕ್ಸ್ ಗೂಗಲ್ ಅನುವಾದ ನಂಬಿ ಕನ್ನಡ ಕುಲಗೆಡಿಸಿದ ಕಂಪನಿಗೆ ಕನ್ನಡಿಗರ ಛೀಮಾರಿ

by Shwetha
April 1, 2026
0

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಭಾಷಾ ವಿವಾದಗಳು ಹೊಸದೇನಲ್ಲ. ಆದರೆ ಈ ಬಾರಿ ವಿವಾದಕ್ಕೆ ಕಾರಣವಾಗಿರುವುದು ನಾಮಫಲಕದ ಅಳತೆಯಲ್ಲ, ಬದಲಾಗಿ ಕನ್ನಡ ಭಾಷೆಯ ಕಗ್ಗೊಲೆ. ಸ್ಥಳೀಯ ಮಾರುಕಟ್ಟೆಯಲ್ಲಿ ವ್ಯಾಪಾರ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram