ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಂಪುಟದಲ್ಲಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ತೀವ್ರ ಕಸರತ್ತು ನಡೆಸಿರುವ ವಿಧಾನಪರಿಷತ್ ಸದಸ್ಯ, ಸೈನಿಕ ಖ್ಯಾತಿಕ ಸಿ.ಪಿ ಯೋಗೇಶ್ವರ್, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ್ದಾರೆ.
ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮೂಲಕ ಹೈಕಮಾಂಡ್ ಮಟ್ಟದಲ್ಲಿ ಲಾಬಿ ನಡೆಸಿರುವ ಸಿ.ಪಿ ಯೋಗೇಶ್ವರ್, ಚನ್ನಪಟ್ಟಣಕ್ಕೆ ನಾನೇ ಸಿಎಂ ಎಂದಿರುವ ಮಾಜಿ ಸಿಎಂ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ.
ಹೆಚ್ಡಿಕೆ ಚನ್ನಪಟ್ಟಣಕಷ್ಟೇ ಸೀಮಿತರಾಗಿದ್ದಾರೆ. ಮುಖ್ಯಮಂತ್ರಿ ಸ್ಥಾನ ಹೋದ ಮೇಲೆ ಕುಮಾರಸ್ವಾಮಿಗೆ ತಳಮಳ ಶುರುವಾಗಿದೆ. ಹತಾಶರಾಗಿ ಮಾತಾಡುತ್ತಿರುವ ಕುಮಾರಸ್ವಾಮಿಗೆ ಈಗ ರಾಜಕೀಯವಾಗಿ ಕಷ್ಟ ಇದೆ. ಬಹಳ ವರ್ಷಗಳಿಂದ ನನ್ನ ವಿರುದ್ಧ ಪಿತೂರಿ ಮಾಡುತ್ತಲೇ ಇದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕೂಡ ನನ್ನ ವಿರುದ್ಧ ಪಿತೂರಿ ಮಾಡುತ್ತಿದ್ದಾರೆ. ಇಬ್ಬರೂ ಯಾವ ಪರಿಸ್ಥಿತಿಯಲ್ಲಿದ್ದಾರೆ ಅಂತ ಎಲ್ಲರಿಗೂ ಗೊತ್ತಿದೆ. ಮುಂದಿನ ದಿನಗಳಲ್ಲಿ ಇಬ್ಬರೂ ಸಾಕಷ್ಟು ಅನುಭವಿಸುತ್ತಾರೆ ಎಂದು ಯೋಗೇಶ್ವರ್ ಎಚ್ಚರಿಕೆ ನೀಡಿದ್ದಾರೆ.
ಯಾವುದೇ ವಿವಾದ ನನಗೆ ಇಷ್ಟ ಇಲ್ಲ. ನನ್ನನ್ನು ಮಂತ್ರಿ ಮಾಡುವ ವಿಚಾರ ಸಿಎಂಗೆ ಬಿಟ್ಟದ್ದು. ಮಂತ್ರಿ ಸ್ಥಾನ ಸಿಗದಿದ್ದರೂ ಪರವಾಗಿಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾನು ಬದ್ದ ಎಂದು ಸಿಪಿವೈ ತಿಳಿಸಿದ್ದಾರೆ.
ಸಚಿವ ಸ್ಥಾನಕ್ಕಾಗಿ ರಮೇಶ್ ಜಾರಕಿಹೊಳಿ ಭೇಟಿಯಾಗಿ ಸಭೆ ಮಾಡಿದ್ರಾ ಎಂಬ ಪ್ರಶ್ನೆಗೂ ಪ್ರತಿಕ್ರಿಯಿಸಿದ ಯೋಗೇಶ್ವರ್, ಇವತ್ತು ಊರಿಗೆ ಹೊರಟಿದ್ದರು. ಒಟ್ಟಿಗೆ ಕುಳಿತು ಊಟ ಮಾಡಿದ್ದೇವೆ. ಶಾಸಕರು ತಮ್ಮ ಅಭಿಪ್ರಾಯ ಹೇಳಿ ಕೊಂಡರು ಅಷ್ಟೇ ಎಂದರು.
ನಾನು ಸಚಿವ ಸ್ಥಾನ ಬೇಕು ಎಂದು ಎಲ್ಲೂ ಹೇಳಿಲ್ಲ. ಒಂದು ವೇಳೆ ಮುಖ್ಯಮಂತ್ರಿಗಳು, ಈ ಭೇಟಿಯಲ್ಲಿ ವಿಶೇಷವಿಲ್ಲ. ಅವರು ವರಿಷ್ಠರು ಮನಸು ಮಾಡಿ ಕೊಟ್ಟರೆ ಅದನ್ನು ನಿಭಾಯಿಸುತ್ತೇನೆ ಎನ್ನುವ ಮೂಲಕ ತಮ್ಮ ಮನದ ಆಸೆಯನ್ನು ಒಪ್ಪಿಕೊಂಡಿದ್ದಾರೆ.
ಸೋತವರು ಎಂದು ನಮ್ಮ ಶಾಸಕರೂ ಕೂಡ ಹೇಳಿಕೆ ನೀಡುತ್ತಾರೆ. ಯಾಕೋ ಗೊತ್ತಿಲ್ಲ, ವಿವಾದ ನನ್ನ ಹಿಂದೆ ಬಿದ್ದಿದೆ ಎಂದು ಬೇಸರ ವ್ಯಕ್ತಪಡಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel