ಬೆಂಗಳೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಅವರು, ಡಿಸಿಎಂ ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ್ದಾರೆ. ಡಿಸಿಎಂ ಡಿಕೆ ಶಿವಕುಮಾರ್ ವಿದೇಶಿ ಪ್ರವಾಸದಲ್ಲಿದ್ದಾಗ, ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಡಿನ್ನರ್ ಮೀಟಿಂಗ್ ನಡೆಸಿದ್ದರು. ಈ ಡಿನ್ನರ್ ಮೀಟಿಂಗ್ ಕುರಿತಂತೆ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಹೆಚ್ ವಿಶ್ವನಾಥ್ ಅವರು ಸಿದ್ದರಾಮಯ್ಯ 30 ತಿಂಗಳ ನಂತರ ಸಿಎಂ ಸ್ಥಾನದಿಂದ ಇಳಿಯಬೇಕಾದ್ದರಿಂದ, ಡಿನ್ನರ್ ಮೀಟಿಂಗ್‌ಗಳನ್ನು ಏರ್ಪಾಡು ಮಾಡಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಏನೇನೋ ಆಟಗಳನ್ನು ಆಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಡಿಕೆ ಶಿವಕುಮಾರ್ 40 ವರ್ಷಗಳಿಂದ ಕಾಂಗ್ರೆಸ್‌ನಲ್ಲಿ ಇದ್ದಾರೆ ಮತ್ತು ಅವರಿಗೆ ಸಿಎಂ ಸ್ಥಾನ ತಪ್ಪಿಸಲು ಆಗಲ್ಲ ಎಂದು ಹೆಚ್ ವಿಶ್ವನಾಥ್ ಹೇಳಿದ್ದಾರೆ. ಡಿಕೆ ಶಿವಕುಮಾರ್ ಎಲ್ಲಿಗೆ ಹೋದರೂ ಕಾರ್ಯಕರ್ತರು ಅವರನ್ನು ಗುರುತಿಸುತ್ತಾರೆ, ಆದರೆ ಸಿದ್ದರಾಮಯ್ಯ ಚೇಲಾಗಳನ್ನು ಜೊತೆಯಲ್ಲಿಟ್ಟುಕೊಂಡು ಆಟವಾಡುತ್ತಿದ್ದಾರೆ ಎಂದು ಲೇವಡಿ ಮಾಡಿದರು.








