ADVERTISEMENT
Wednesday, January 21, 2026
  • Home
  • About Us
  • Contact Us
  • Privacy Policy
Cini Bazaar
Sports
Advertisement
ADVERTISEMENT
  • Home
  • Newsbeat
  • State
    • Samagra karnataka
    • Malenadu Karnataka
    • Kalyana karnataka
    • Coastal Karnataka
    • Hale Mysore
    • Mumbai Karnataka
  • Politics
  • National
  • International
  • Crime
  • Cinema
  • Sports
  • Astro
  • Health
  • More
    • Life Style
    • TECHNOLOGY
    • Saaksha Special
    • Marjala Manthana
    • Cooking
    • Bigg Boss 8
    • Viral News
    • IPL 2020
    • IPL 2021
    • GALLERY
No Result
View All Result
Home ರಾಜ್ಯ

ಸತ್ಯಕ್ಕೆ ಸಾವಿಲ್ಲ, ಷಡ್ಯಂತ್ರ ರಾಜಕಾರಣಕ್ಕೆ ಆಯಸ್ಸಿಲ್ಲ: ಬಿಜೆಪಿ ಹಾಗೂ ಇಡಿ ವಿರುದ್ಧ ಡಿಕೆಶಿ ಕೆಂಡಾಮಂಡಲ

DKS Kendamandala against BJP and ED

Shwetha by Shwetha
December 19, 2025
in ರಾಜ್ಯ, Newsbeat, Politics, State, ರಾಜಕೀಯ
Share on FacebookShare on TwitterShare on WhatsappShare on Telegram

ಬೆಳಗಾವಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಸತ್ಯಕ್ಕೆ ಜಯ ಸಿಕ್ಕಿದೆ. ನಮ್ಮನ್ನು ಪಿತೂರಿಯಿಂದ ಸೋಲಿಸಲು ಸಾಧ್ಯವಿಲ್ಲ, ದ್ವೇಷದಿಂದ ಕುಗ್ಗಿಸಲು ಸಾಧ್ಯವಿಲ್ಲ. ಸತ್ಯಕ್ಕೆ ಸಾವಿಲ್ಲ, ಸುಳ್ಳು ಕೇಸ್‌ಗಳಿಗೆ ಆಯುಷ್ಯವಿಲ್ಲ ಎಂಬುದಕ್ಕೆ ನ್ಯಾಯಾಲಯದ ಆದೇಶವೇ ಸಾಕ್ಷಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಕೇಂದ್ರ ತನಿಖಾ ಸಂಸ್ಥೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಬೆಳಗಾವಿಯ ಸುವರ್ಣ ವಿಧಾನಸೌಧದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೃಹತ್ ಧರಣಿಯ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನ್ಯಾಷನಲ್ ಹೆರಾಲ್ಡ್ ಪ್ರಕರಣ, ಜಾರಿ ನಿರ್ದೇಶನಾಲಯದ (ಇ.ಡಿ) ತನಿಖೆ ಮತ್ತು ಬಿಜೆಪಿಯ ದ್ವೇಷ ರಾಜಕಾರಣದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Related posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

January 21, 2026
ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

January 21, 2026

ನ್ಯಾಷನಲ್ ಹೆರಾಲ್ಡ್ ದೇಶದ ಆಸ್ತಿ, ದ್ವೇಷ ಬಿಜೆಪಿಯ ಆಸ್ತಿ

ನ್ಯಾಷನಲ್ ಹೆರಾಲ್ಡ್ ಈ ದೇಶದ ಆಸ್ತಿಯೇ ಹೊರತು ವೈಯಕ್ತಿಕ ಆಸ್ತಿಯಲ್ಲ. ಆದರೆ ದ್ವೇಷ ರಾಜಕಾರಣ ಮಾಡುವುದೇ ಬಿಜೆಪಿಯ ಆಸ್ತಿಯಾಗಿದೆ. ಬಿಜೆಪಿ ಎಂದರೆ ಬುರುಡೆ ಜನತಾ ಪಕ್ಷವಾಗಿದೆ. ಎಷ್ಟೇ ಪಿತೂರಿ ಮಾಡಿದರೂ ಅಂತಿಮವಾಗಿ ನ್ಯಾಯ ನಮಗೆ ಸಿಕ್ಕಿದೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ಜೈಲಿಗೆ ಕಳುಹಿಸಲು ದೊಡ್ಡ ಮಟ್ಟದ ಪಿತೂರಿ ನಡೆಸಲಾಗಿತ್ತು. ಆದರೆ ಸತ್ಯ ಮೇವ ಜಯತೆ, ಬಿಜೆಪಿಗಿಲ್ಲ ಘನತೆ ಎಂಬುದು ಸಾಬೀತಾಗಿದೆ ಎಂದು ಡಿಕೆಶಿ ಲೇವಡಿ ಮಾಡಿದರು.

ನೆಹರು ಸ್ಥಾಪಿಸಿದ ಸಂಸ್ಥೆ ಕಾಂಗ್ರೆಸ್ ಸ್ವತ್ತು

ಇತಿಹಾಸವನ್ನು ಉಲ್ಲೇಖಿಸಿದ ಡಿಕೆ ಶಿವಕುಮಾರ್, 1937ರಲ್ಲಿ ಜವಹಾರ್ ಲಾಲ್ ನೆಹರು ಅವರು ಜನರ ಧ್ವನಿಯಾಗಲು ಮತ್ತು ಸ್ವಾತಂತ್ರ್ಯ ಹೋರಾಟಕ್ಕೆ ನೆರವಾಗಲು ನ್ಯಾಷನಲ್ ಹೆರಾಲ್ಡ್ ಪತ್ರಿಕೆಯನ್ನು ಆರಂಭಿಸಿದರು. ಈ ಸಂಸ್ಥೆ ಮಹಾತ್ಮಾ ಗಾಂಧಿ ಅಥವಾ ನೆಹರು ಅವರ ವೈಯಕ್ತಿಕ ಆಸ್ತಿಯಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ. ಪಕ್ಷದ ಅಧ್ಯಕ್ಷರಾದವರು ಈ ಸಂಸ್ಥೆಯ ಪದನಿಮಿತ್ತ ಷೇರುದಾರರಾಗುತ್ತಾರೆ ಮತ್ತು ಜವಾಬ್ದಾರಿ ಹೊರುತ್ತಾರೆ. ಆದರೆ, ಬಿಜೆಪಿ ನಾಯಕರು ಇದನ್ನು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ವೈಯಕ್ತಿಕ ಆಸ್ತಿ ಎಂದು ಬಿಂಬಿಸಿ, ಸುಳ್ಳು ದೂರು ನೀಡಿ ಅಕ್ರಮ ಹಣ ವರ್ಗಾವಣೆ ಪ್ರಕರಣ ದಾಖಲಿಸಿ ಕಿರುಕುಳ ನೀಡುತ್ತಿದ್ದಾರೆ ಎಂದು ವಿವರಿಸಿದರು.

ಅಧಿಕಾರ ಶಾಶ್ವತವಲ್ಲ, ಟ್ರಸ್ಟ್ ಆಸ್ತಿ ನಮ್ಮದಲ್ಲ

ತಮ್ಮ ವಾದವನ್ನು ಸಮರ್ಥಿಸಿಕೊಳ್ಳಲು ಉದಾಹರಣೆ ನೀಡಿದ ಅವರು, ಕಾಂಗ್ರೆಸ್ ಭವನ ಟ್ರಸ್ಟ್ ಬೆಂಗಳೂರಿನಲ್ಲಿದೆ. ಹಿಂದೆ ಮಲ್ಲಿಕಾರ್ಜುನ ಖರ್ಗೆ ಅವರು ಟ್ರಸ್ಟಿಯಾಗಿದ್ದರು, ಈಗ ಕೆಪಿಸಿಸಿ ಅಧ್ಯಕ್ಷನಾಗಿ ನಾನು ಅಧ್ಯಕ್ಷನಾಗಿದ್ದೇನೆ. ಸಿಎಂ ಸಿದ್ದರಾಮಯ್ಯ ಅವರು ಸಿಎಲ್‌ಪಿ ನಾಯಕರಾಗಿ ಟ್ರಸ್ಟಿಯಾಗಿದ್ದಾರೆ. ಹಾಗಂದ ಮಾತ್ರಕ್ಕೆ ನೂರಾರು ಕಟ್ಟಡಗಳಿರುವ ಈ ಟ್ರಸ್ಟ್ ಆಸ್ತಿ ನಮ್ಮದಾಗುತ್ತದೆಯೇ? ನಾನು ಅಧ್ಯಕ್ಷ ಸ್ಥಾನದಿಂದ ಇಳಿದ ಮೇಲೆ ಬರುವವರು ಇದರ ಜವಾಬ್ದಾರಿ ಹೊರುತ್ತಾರೆ. ಇದೇ ನಿಯಮ ನ್ಯಾಷನಲ್ ಹೆರಾಲ್ಡ್‌ಗೂ ಅನ್ವಯಿಸುತ್ತದೆ. ಆದರೆ ಬಿಜೆಪಿಯವರು 2 ಸಾವಿರ ಕೋಟಿ ಮೌಲ್ಯದ ಆಸ್ತಿಯನ್ನು ಗಾಂಧಿ ಕುಟುಂಬದವರು ತಮ್ಮದಾಗಿಸಿಕೊಂಡಿದ್ದಾರೆ ಎಂದು ಸುಳ್ಳು ಪ್ರಚಾರ ಮಾಡುತ್ತಿದ್ದಾರೆ ಎಂದು ಸ್ಪಷ್ಟಪಡಿಸಿದರು.

ದೇಣಿಗೆ ನೀಡುವುದು ಅಪರಾಧವೇ?

ಇದೇ ಪ್ರಕರಣದಲ್ಲಿ ಇ.ಡಿ ಸಂಸ್ಥೆ ನನಗೂ, ನನ್ನ ಸಹೋದರನಿಗೂ ಹಾಗೂ ಶಾಮನೂರು ಶಿವಶಂಕರಪ್ಪ ಅವರ ಕುಟುಂಬಕ್ಕೂ ನೋಟಿಸ್ ನೀಡಿತ್ತು. ನಾನು ಕಷ್ಟಪಟ್ಟು ಸಂಪಾದಿಸಿದ ಹಣವನ್ನು ನನ್ನಿಷ್ಟದಂತೆ ಪಕ್ಷಕ್ಕೆ ಅಥವಾ ನ್ಯಾಷನಲ್ ಹೆರಾಲ್ಡ್ ಸಂಸ್ಥೆಗೆ ದೇಣಿಗೆ ನೀಡಿದ್ದೇನೆ. ನಮ್ಮ ಶಾಸಕರೂ ದೇಣಿಗೆ ನೀಡಿದ್ದಾರೆ. ದೇಣಿಗೆ ನೀಡಿದ್ದಕ್ಕೆ ಲೆಕ್ಕ ಕೇಳುವುದು ಮತ್ತು ನೋಟಿಸ್ ನೀಡುವುದು ಯಾವ ನ್ಯಾಯ? ಇ.ಡಿ ನನ್ನ ವಿರುದ್ಧ ಪಿಎಂಎಲ್‌ಎ ಪ್ರಕರಣ ದಾಖಲಿಸಿತ್ತು, ಆದರೆ ಸುಪ್ರೀಂ ಕೋರ್ಟ್ ಅದನ್ನು ವಜಾ ಮಾಡಿದೆ. ಅದೇ ರೀತಿ ಸೋನಿಯಾ ಹಾಗೂ ರಾಹುಲ್ ಗಾಂಧಿ ಅವರ ಮೇಲಿನ ಸುಳ್ಳು ಕೇಸ್‌ ಕೂಡ ನಿಲ್ಲುವುದಿಲ್ಲ ಎಂದು ಹೇಳಿದರು.

ಇ.ಡಿ ವಿಶ್ವಾಸಾರ್ಹತೆ ಕಳೆದುಕೊಂಡಿದೆ

ತನಿಖಾ ಸಂಸ್ಥೆಗಳ ವಿರುದ್ಧ ಕಿಡಿಕಾರಿದ ಡಿಕೆಶಿ, ರಾಜಕೀಯ ಪ್ರೇರಿತ ಪ್ರಕರಣಗಳನ್ನು ನ್ಯಾಯಾಲಯ ಪರಿಗಣಿಸದೇ ಇರುವುದು ಬಿಜೆಪಿ ಮತ್ತು ಇ.ಡಿಗೆ ನೀಡಿರುವ ಎಚ್ಚರಿಕೆ ಗಂಟೆಯಾಗಿದೆ. ಇ.ಡಿ ತನ್ನ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ತನ್ನ ವರ್ಚಸ್ಸನ್ನು ಕಳೆದುಕೊಂಡಿದೆ. ಕೇವಲ ವಿರೋಧ ಪಕ್ಷದ ನಾಯಕರ ಮೇಲೆ ಮುಗಿಬೀಳುವ ತನಿಖಾ ಸಂಸ್ಥೆಗಳು, ಆಡಳಿತರೂಢ ಬಿಜೆಪಿ ನಾಯಕರ ವಿರುದ್ಧ ಏಕೆ ಪ್ರಕರಣ ದಾಖಲಿಸುತ್ತಿಲ್ಲ? ಅಂತಿಮವಾಗಿ ಸತ್ಯ ಗೆದ್ದಿದೆ, ನ್ಯಾಯಾಲಯದ ತೀರ್ಪಿನಿಂದ ನನಗೆ ಸಂತೋಷವಾಗಿದೆ ಎಂದು ತಿಳಿಸಿದರು.

ಈ ಪ್ರತಿಭಟನೆ ಕೇವಲ ಬೆಳಗಾವಿಗೆ ಸೀಮಿತವಾಗಿಲ್ಲ, ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲೂ ಮುಂದುವರಿಯಲಿದ್ದು, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರ ಕೈ ಬಲಪಡಿಸಲು ಕಾಂಗ್ರೆಸ್ ಸದಾ ಸಿದ್ಧವಿದೆ ಎಂದು ಕರೆ ನೀಡಿದರು.

ShareTweetSendShare
Join us on:

Related Posts

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ವಸ್ತ್ರ ಸಂಹಿತೆ ಜಾರಿ: ಸಾಂಪ್ರದಾಯಿಕ ಉಡುಗೆ ಕಡ್ಡಾಯ

by Shwetha
January 21, 2026
0

ಉಡುಪಿಯ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಆಗಮಿಸುವ ಭಕ್ತರಿಗೆ ಇನ್ನು ಮುಂದೆ ಸಾಂಪ್ರದಾಯಿಕ ವಸ್ತ್ರ ಧಾರಣೆ ಕಡ್ಡಾಯವಾಗಲಿದೆ. ಧಾರ್ಮಿಕ ಪರಂಪರೆ, ಸಂಸ್ಕೃತಿ ಹಾಗೂ ಮಠದ ಗೌರವವನ್ನು ಕಾಪಾಡುವ...

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

ಫೈನಲ್‌ಗೆ ಎಂಟ್ರಿ ಪಡೆಯಲು RCBಗೆ ಇನ್ನೆಷ್ಟು ಗೆಲುವು ಬೇಕು?

by Shwetha
January 21, 2026
0

2026ರ ಮಹಿಳಾ ಪ್ರೀಮಿಯರ್ ಲೀಗ್‌ (WPL)ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಗೆಲುವಿನ ಸರಣಿ ಮುಂದುವರೆದಿದೆ. ಸ್ಮೃತಿ ಮಂಧಾನ ಅವರ ನಾಯಕತ್ವದಲ್ಲಿ ಆಡುತ್ತಿರುವ RCB ಈವರೆಗೆ...

ಶಬರಿಮಲೆ ತೀರ್ಥಯಾತ್ರೆ  ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

ಶಬರಿಮಲೆ ತೀರ್ಥಯಾತ್ರೆ ಸಂಪನ್ನ – ಭಕ್ತಿಭಾವದಿಂದ ಅಂತ್ಯಗೊಂಡ ಅಯ್ಯಪ್ಪ ಋತು

by Shwetha
January 21, 2026
0

ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರ ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಈ ವರ್ಷದ ವಾರ್ಷಿಕ ತೀರ್ಥಯಾತ್ರೆಯ ಋತು ನಿನ್ನೆ ಭಕ್ತಿಭಾವಪೂರ್ಣವಾಗಿ ಅಂತ್ಯಗೊಂಡಿದೆ. ಸಾವಿರಾರು ಭಕ್ತರ ಸಾಕ್ಷಿಯಾಗಿ, ಸಾಂಪ್ರದಾಯಿಕ...

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

ರಾಜ್ಯ ರಾಜಕೀಯದ ಬಗ್ಗೆ ನಮ್ಮ ಮನೆಯಲ್ಲೇ 2 ಗಂಟೆ ಚರ್ಚೆ ನಡೆದಿದೆ: ಪ್ರಿಯಾಂಕ್ ಖರ್ಗೆ ಸ್ಫೋಟಕ ಹೇಳಿಕೆ

by Shwetha
January 21, 2026
0

ಬೆಂಗಳೂರು: ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವ ಪ್ರಿಯಾಂಕ್ ಖರ್ಗೆ ನೀಡಿದ್ದಾರೆ. ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮತ್ತು ದಲಿತ...

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

ಅಮಾನತು ಮಾತ್ರವಲ್ಲ ಡಿಸ್ ಮಿಸ್ ಕೂಡ ಮಾಡ್ತೀವಿ ರಾಮಚಂದ್ರ ರಾವ್‌ಗೆ ನಡುಕ ಹುಟ್ಟಿಸಿದ ಗೃಹ ಸಚಿವರು‌

by Shwetha
January 21, 2026
0

ಬೆಂಗಳೂರು: ಪೊಲೀಸ್ ಇಲಾಖೆಯ ಘನತೆ ಮತ್ತು ಗೌರವಕ್ಕೆ ಧಕ್ಕೆ ತರುವಂತಹ ಗಂಭೀರ ಆರೋಪಕ್ಕೆ ಗುರಿಯಾಗಿರುವ ಸಿಐಡಿ ಡಿಜಿಪಿ ರಾಮಚಂದ್ರ ರಾವ್ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ...

Load More

POPULAR NEWS

  • ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    ನೀವು ಅಂದುಕೊಂಡ ಕೆಲಸ ಆಗಬೇಕೆಂದರೆ ಕಾರ್ಯಸಿದ್ದಿ ಗಣಪತಿ ದೇವರಿಗೆ ಈ ಸ್ತೋತ್ರವನ್ನು ಹೇಳಿಕೊಂಡು ಪೂಜೆ ಮಾಡಿ ನಿಮ್ಮ ಜೀವನದಲ್ಲಿ ಅದ್ಬುತ ಬದಲಾವಣೆಗಳು ಆಗುತ್ತವೆ…!!

    0 shares
    Share 0 Tweet 0
  • ನಿಮ್ಮ ಶತ್ರುಗಳು ಮೆತ್ತಗಾಗಿ ಮೂಲೆ ಗುಂಪು ಸೇರಬೇಕೆಂದು ಕೊಂಡಿದ್ದೀರಾ ಹಾಗಾದ್ರೆ ಈ ಒಂದು ಚಿಕ್ಕ ತಂತ್ರಸಾರ ಮಾಡಿ ಸಾಕು..!!!

    0 shares
    Share 0 Tweet 0
  • ದೋಷಗಳನ್ನು ಪರಿಹಾರ ಮಾಡುವ ಶ್ರೀ ಸುಬ್ರಹ್ಮಣ್ಯ ಸ್ತೋತ್ರಂ ಭಕ್ತಿಯಿಂದ ಪ್ರಾರ್ಥಿಸಿ ಮನೋಕಾಮನೆಗಳು ಈಡೇರುತ್ತದೆ

    0 shares
    Share 0 Tweet 0
  • ಯಂತ್ರ, ಮಂತ್ರ,ತಂತ್ರಸಾರದ, ಶ್ರೀ ಸಿಗಂದೂರ ಚೌಡೇಶ್ವರೀ ತಾಯಿಯಿಂದ ನಮಗೆ ಶ್ರೀ ರಕ್ಷೇ ಪ್ರಾಪ್ತಿ…

    0 shares
    Share 0 Tweet 0
  • Astrology – ಯಾವ ಯಾವ ರಾಶಿಯವರಿಗೆ ಯಾವ ನಕ್ಷತ್ರ ಬರುತ್ತದೆ ಗೋತ್ತಾ ನಿಮಗೆ..??

    0 shares
    Share 0 Tweet 0

Saakshatv News

  • Home
  • About Us
  • Contact Us
  • Privacy Policy

© 2026 SaakshaTV - All Rights Reserved | Powered by Kalahamsa Infotech Pvt. ltd.

No Result
View All Result
  • Home
  • Newsbeat
  • State
    • Kalyana karnataka
    • Karavali Karnataka
    • Malenadu Karnataka
    • Mumbai Karnataka
    • Samagra karnataka
    • Hale Mysore
  • Politics
  • National
  • International
  • Crime
  • Cinema
  • Sports
  • Astrology
  • Health
  • More
    • Business
    • Asia Cup 2022
    • Marjala Manthana
    • Cooking
    • Culture
    • GALLERY
    • Saaksha Special
    • Life Style
    • TECHNOLOGY
    • Travel
    • Viral News
    • Bigg Boss 8
    • IPL 2021
    • CPL 2020
    • IPL 2020

© 2026 SaakshaTV - All Rights Reserved | Powered by Kalahamsa Infotech Pvt. ltd.

  • →
  • Telegram