ನವದೆಹಲಿ: ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸಂಸದ ರಾಹುಲ್ ಗಾಂಧಿ ಸ್ಪರ್ಧಿಸಿರುವ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ಪ್ರಚರ ಕೈಗೊಂಡ ಸಂದರ್ಭದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಕೆಶಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಚುನಾವಣಾ ಭಾಷಣಗಳಲ್ಲಿ ಮಂಗಳಸೂತ್ರವನ್ನು ಕಿತ್ತುಕೊಂಡರು ಎಂದು ಮಾತನಾಡುತ್ತಿದ್ದಾರೆ. ಮಂಗಳಸೂತ್ರವನ್ನು ಯಾರು ಕಿತ್ತುಕೊಂಡರು ಗೊತ್ತಿಲ್ಲ. ಆದರೆ ಪ್ರಧಾನಿ ಮೋದಿ ಇಂತಹ ಆಕ್ಷೇಪಾರ್ಹ ಹೇಳಿಕೆ ನೀಡಬಾರದು ಎಂದು ವಾಗ್ದಾಳಿ ನಡೆಸಿದ್ದಾರೆ.
ಕಳೆದ ಚುನಾವಣೆಯಲ್ಲಿ ಕೇಂದ್ರ ಸರ್ಕಾರದಿಂದ ರೈತರ ಆದಾಯ ದ್ವಿಗುಣ ಮಾಡುವ ಭರವಸೆ ನೀಡಿದ್ದರು. ನಮ್ಮ ಸರ್ಕಾರದ ಅವಧಿಯಲ್ಲಿ ರೈತರ ಸಾಲ ಮನ್ನಾ ಮಾಡಿದ್ದೇವೆ. 60 ಸಾವಿರ ಹುದ್ದೆಗಳಿಗೆ 6೦ ಲಕ್ಷ ಜನರು ಅರ್ಜಿ ಹಾಕಿದ್ದಾರೆ. ಇದು ನಿರುದ್ಯೋಗ ಸಮಸ್ಯೆಯ ತೀವ್ರತೆ ತೋರುತ್ತದೆ. ನಿಮ್ಮ ಭಾಗದ ಯುವಕರು ದೇಶದ ಬೇರೆ ಬೇರೆ ಭಾಗಕ್ಕೆ ಉದ್ಯೋಗ ಅರಸಿ ಹೊರಟಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾವು ಸಂವಿಧಾನ ಬದಲಾಯಿಸಲು ಬಿಡುವುದಿಲ್ಲ. ನಾನು ಅದನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.