`ಸಿದ್ದರಾಮಯ್ಯ ನೋವಿನ ಹೇಳಿಕೆ’ ಡಿಕೆಶಿ ಹೇಳಿದ್ದೇನು..?
ಬೆಳಗಾವಿ : ನಾನು ಎರಡನೇ ಬಾರಿಗೆ ಮುಖ್ಯಮಂತ್ರಿ ಆಗೋದು ನಮ್ಮವರಿಗೇ ಬೇಡವಾಗಿತ್ತು ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ” ಸಿದ್ದರಾಮಯ್ಯ ಅವರು 2ನೇ ಬಾರಿಗೆ ಮುಖ್ಯಮಂತ್ರಿ ಆಗಲೆಂಬ ಬಯಕೆ ನಮಗಂತೂ ಇತ್ತು” ಎಂದು ಪ್ರತಿಕ್ರಿಯೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯನವರ ನಾಯಕತ್ವದಲ್ಲಿ ಚುನಾವಣೆ ಎದುರಿಸಿದವರು ನಾವು.
ಅವರು 2ನೇ ಬಾರಿಗೆ ಮುಖ್ಯಮಂತ್ರಿ ಆಗಲೆಂಬ ಬಯಕೆ ನಮಗಂತೂ ಇತ್ತು. ಆ ಬಗ್ಗೆ ಮೈಸೂರು ಜಿಲ್ಲೆಯ ಹುಣಸೂರಲ್ಲಿ ನಾನೇ ಭಾಷಣ ಮಾಡಿದ್ದೆ.
ಪಕ್ಷದ ವರಿಷ್ಠರಾದ ರಾಹುಲ್ ಗಾಂಧಿ ಸೇರಿದಂತೆ ಎಲ್ಲರೂ ಸಂಪೂರ್ಣ ಆಶೀರ್ವಾದ ಮಾಡಿದ್ದರು. ಆದ್ರೆ ಸಿದ್ದರಾಮಯ್ಯನವರು ಯಾವ ದೃಷ್ಟಿಯಲ್ಲಿ ಹೇಳಿಕೆ ನೀಡಿದ್ದಾರೆ, ಆಂತರಿಕವಾಗಿ ಏನಾಯಿತೋ ಗೊತ್ತಿಲ್ಲ.
ಅಧ್ಯಯನ ಮಾಡಲು ಹೋಗಿಲ್ಲ. ಅವರು ಯಾರದಾದರೂ ಹೆಸರು ಪ್ರಸ್ತಾಪಿಸಿದ್ದರೆ ಪ್ರತಿಕ್ರಿಯಿಸಬಹುದಿತ್ತು. ಜನರಲ್ ಆಗಿ ಹೇಳಿದರೆ ನಾವು ಹೇಳಕ್ಕಾಗತ್ತಾ ಎಂದು ಪ್ರಶ್ನಿಸಿದರು.
ಇನ್ನು ಸಿದ್ದರಾಮಯ್ಯನವರನ್ನು ಎಲ್ಲರೂ ಬೆಂಬಲಿಸಿದ್ದರಿಂದಲೇ ಅವರು ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಸಾಧ್ಯವಾಯಿತು.
ಎಸ್.ಎಂ. ಕೃಷ್ಣ ಅವರು ಎರಡು ಕಡೆ ನಿಲ್ಲೋಕೆ ಬಿಟ್ಟಿರಲಿಲ್ಲ ಎಂದ ಡಿಕೆಶಿ, ಸಿದ್ದರಾಮಯ್ಯ ಹಿರಿಯ ರಾಜಕಾರಣಿ ಇದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಗೆ ಕಾರಣವನ್ನು ಅವರೇ ಹುಡುಕುತ್ತಾರೆ.
ಕರ್ಮಭೂಮಿಯಲ್ಲಿ ಯಾರಿಗೆ ಸಹಾಯ ಮಾಡಿರುತ್ತೇವೆಯೋ, ಅವರಿಂದಲೇ ತೊಂದರೆ ಆದಾಗ ನೋವಾಗುತ್ತದೆ ಎಂದು ತಿಳಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel