ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ನಂತರ ಅಧ್ಯಕ್ಷ ಡಿ.ಕೆ ಶಿವಕುಮಾರ್ ಜಿಲ್ಲಾಧ್ಯಕ್ಷರುಗಳ ಜತೆ ವಿಡಿಯೋ ಕಾನ್ಫರೆನ್ಸ್ ನಡೆಸಿದರು.

ಸದಾಶಿವನಗರ ತಮ್ಮ ನಿವಾಸದಿಂದಲೇ ಜಿಲ್ಲಾಧ್ಯಕ್ಷ ಜತೆ ಮಾತುಕತೆ ನಡೆಸಿದ ಡಿ.ಕೆ ಶಿವಕುಮಾರ್, ರಾಜ್ಯದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೋವಿಡ್ ಸೋಂಕು ಪರಿಸ್ಥಿತಿ ನಿರ್ವಹಣೆಯಲ್ಲಿ ರಾಜ್ಯ ಸರಕಾರದ ವೈಫಲ್ಯ, ಸಂಕಷ್ಟದಲ್ಲಿರುವವರ ನೆರವಿಗೆ ಕಾಂಗ್ರೆಸ್ ಕಾರ್ಯಕರ್ತರು ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಿದರು.
ಅಲ್ಲದೆ ತಮ್ಮ ಪದಗ್ರಹಣ ಕಾರ್ಯಕ್ರಮವನ್ನು ಆಧುನಿಕ ತಂತ್ರಜ್ಞಾನ, ಸಾಮಾಜಿಕ ಜಾಲತಾಣ, ಎಲೆಕ್ಟ್ರಾನಿಕ್ ಮಾಧ್ಯಮಗಳ ಮೂಲಕ ಜನರಿಗೆ ತಲುಪಿದ ವಿಚಾರ ಸೇರಿದಂತೆ ಹಲವು ವಿಚಾರಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು.








