ಶಿರಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಿಸಿದ ಡಿಕೆಶಿ
ಬೆಂಗಳೂರು, ಸೆ. 16: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದೀರ್ಘ ಚರ್ಚೆಯ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾಂಗ್ರೆಸ್ ಅಭ್ಯರ್ಥಿಯನ್ನು ಘೊಷಣೆ ಮಾಡಿದ್ದಾರೆ. ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರನ್ನು ಶಿರಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಡಿಕೆಶಿ ಘೋಷಣೆ ಮಾಡಿದ್ದಾರೆ.
ಸಭೆಯ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ತುಮಕೂರು ಜಿಲ್ಲೆಯ ನಾಯಕರ ಜೊತೆ ಸಭೆ ನಡೆಸಿ ಪಕ್ಷದ ಅಭ್ಯರ್ಥಿಯನ್ನು ಆಯ್ಕೆ ಮಾಡಿದ್ದೇವೆ. ಮಾಜಿ ಗೃಹಸಚಿವ ಡಾ. ಪರಮೇಶ್ವರ್ ನೇತೃತ್ವತ್ವದಲ್ಲಿ ಎಲ್ಲರೂ ಒಟ್ಟಾಗಿ ಶಿರಾ ಉಪಚುನಾವಣೆಯನ್ನು ಎದುರಿಸುತ್ತೇವೆ ಎಂದು ಹೇಳಿದ್ದಾರೆ.
ಇಂದಿನಿಂದಲೇ ಚುನಾವಣೆ ಕಾರ್ಯ ಪ್ರಾರಂಭವಾಗಲಿದ್ದು, ನಾವೆಲ್ಲರೂ ಅವರಿಗೆ ಸಾಥ್ ಕೊಡುತ್ತಿದ್ದೇವೆ. ಕ್ಷೇತ್ರದ ಹಿತದೃಷ್ಠಿಯಿಂದ ಎಲ್ಲರೂ ಒಟ್ಟಾಗಿ ಉಪಚುನಾವಣೆಯನ್ನು ಎದುರಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿದ್ದಾರೆ.
ಶಿರಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಟಿಕೆಟ್ ಪ್ರಬಲ ಆಕಾಂಕ್ಷಿಯಾಗಿದ್ದ ಕೆ.ಎನ್. ರಾಜಣ್ಣ ಅವರನ್ನು ಉಪಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.