ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ಕಾಂಗ್ರೆಸ್ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಈ ಮತ ಬೇಟೆಯ ಮಧ್ಯೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಒಟ್ಟಿಗೆ ಫೋಟೋಗೆ ಫೋಸ್ ನೀಡುವುದರ ಮೂಲಕ ಮತ್ತೆ ಗಮನ ಸೆಳೆದಿದ್ದಾರೆ.
ಈ ಫೋಟೋಗೆ ಫೋಸ್ ಕೊಟ್ಟ ಇಬ್ಬರು ಕೈ ನಾಯಕರ ಹಾವಭಾವ ತೀರಾ ವಿಶೇಷವಾಗಿತ್ತು. ಖಾಸಗಿ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಪರಸ್ಪರ ಮುಖಾಮುಖಿಯಾಗಿದ್ದರು. ಈ ಸಂದರ್ಭದಲ್ಲಿ ಇಬ್ಬರೂ ಹೆಗಲ ಮೇಲೆ ಕೈ ಹಾಕಿ ಫೋಟೋ ಶೂಟ್ ಗೆ ಫೋಸ್ ಕೊಟ್ಟಿದ್ದಾರೆ.
ಸಿದ್ದರಾಮಯ್ಯ ಅವರು ಡಿಕೆಶಿ ಹೆಗಲ ಮೇಲೆ ಕೈ ಹಾಕಿ ನಗು ಬೀರಿದ್ದಾರೆ. ಡಿಕೆಶಿ ಅವರು ಸಿದ್ದರಾಮಯ್ಯ ಧರಿಸಿದ್ದ ಶರ್ಟ್ ನಲ್ಲಿ ಕಾಂಗ್ರೆಸ್ ಪಕ್ಷದ ಚಿಹ್ನೆ ಇಲ್ಲದಿರುವುದನ್ನು ಗಮನಿಸಿ, ಕೂಡಲೇ ತಾವೇ ಸಿದ್ದರಾಮಯ್ಯ ಜೇಬಿಗೆ ಕೈ ಹಾಕಿ ಪಕ್ಷದ ಚಿಹ್ನೆ ಇರುವ ಬ್ಯಾಡ್ಜ್ ಹಾಕಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಇಬ್ಬರ ಸ್ನೇಹ ಮಿಲನ ಪಕ್ಷದಲ್ಲಿನ ಕಾರ್ಯಕರ್ತರಿಗೆ ಉತ್ಸಾಹ ತಂದಂತಾಗಿದೆ.